ನವದೆಹಲಿ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಕೋಚಿಂಗ್ ಕೇಂದ್ರಗಳ ಸಂಖ್ಯೆ ವಿಪರೀತ ಏರಿಕೆಯಾಗಿರುವುದು ಮತ್ತು ಅದರಿಂದ ಉಂಟಾಗುವ ಸಾಮಾಜಿಕ ಸಮಸ್ಯೆಗಳ ಕುರಿತು ಪರಿಶೀಲಿಸಲು ಸಂಸದೀಯ ಸಮಿತಿ ನಿರ್ಧರಿಸಿದೆ.

ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಜನರು ಮತ್ತು ಕ್ರೀಡೆಗಳಿಗೆ ಸಂಬಂಧಿಸಿದ ಸ್ಥಾಯಿ ಸಮಿತಿಯು ಕೃತಕ ಬುದ್ಧಿಮತ್ತೆ (ಎ.ಐ) ಹಾಗೂ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಮೇಲೆ ಆಧುನಿಕ ತಂತ್ರಜ್ಞಾನವು ಬೀರಿರುವ ಪ್ರಭಾವವನ್ನೂ ಪರಿಶೀಲಿಸಲಿದೆ.

ಕೋಚಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಕಾರಣವಾದ ಅಂಶಗಳು, ಅದರಿಂದ ಉಂಟಾಗಿರುವ ಸಮಸ್ಯೆಗಳು ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಸಮಿತಿಯು ಪರಿಶೀಲಿಸಲಿದೆ ಎಂದು ಲೋಕಸಭೆಯ ಪ್ರಕಟಣೆ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲಿಕ್ಕಾಗಿ ಕೋಚಿಂಗ್ ಕೇಂದ್ರಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಕಲಿಕೆಯ ಒತ್ತಡದಿಂದ ಆತ್ಮಹತ್ಯೆಗೆ ಮುಂದಾಗುತ್ತಿರುವ ಪ್ರಕರಣಗಳು ಈಚೆಗೆ ನಡೆದಿವೆ. ‘ಭಾರತದ ಕೋಚಿಂಗ್ ಕೇಂದ್ರಗಳ ರಾಜಧಾನಿ’ ಎಂಬ ಖ್ಯಾತಿ ಪಡೆದಿರುವ ರಾಜಸ್ಥಾನದ ಕೋಟಾ ನಗರವೊಂದರಲ್ಲೇ ಹಲವು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.