ನವದೆಹಲಿ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಗರ್ಭಿಣಿಯೊಬ್ಬರು(25) ಮೃತಪಟ್ಟಿರುವ ಘಟನೆ ಈಶಾನ್ಯ ದೆಹಲಿಯ ಮುಸ್ತಾಬಾದ್ ಪ್ರದೇಶದಲ್ಲಿ ನಡೆದಿದೆ. ಆದರೆ ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣವೆಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಸೋಮವಾರ (ಮೇ 25) ಈ ಘಟನೆ ನಡೆದಿದೆ. ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆ ಆಕೆ ತಾನೇ ಆಯ್ಕೆ ಮಾಡಿದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆದರೆ, ಮದುವೆಯಾದ ಒಂದು ತಿಂಗಳೊಳಗೆ ಪತಿ ಮತ್ತು ಆತನ ಕುಟುಂಬದವರು ಚಿನ್ನ ಮತ್ತು ನಗದು ನೀಡುವಂತೆ ಬೇಡಿಕೆ ಇಟ್ಟು ಮಾನಸಿಕ ಕಿರುಕುಳ ನೀಡುತ್ತಿದ್ದರು ಕುಟುಂಬಸ್ಥರು ಆರೋಪಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ದಂಪತಿ ನಡುವೆ ಭಿನ್ನಾಭಿಪ್ರಾಯಗಳು ಮೂಡಿದ್ದವು. ಇದನ್ನು ಬಗೆಹರಿಸಲು ನನ್ನ ಸಹೋದರ, ತಾಯಿ ಮತ್ತು ಇತರ ಸಂಬಂಧಿಕರು ಅಲ್ಲಿಗೆ ಹೋಗಿದ್ದರು ಎಂದು ಮೃತ ಮಹಿಳೆಯ ಸಹೋದರಿ ತಿಳಿಸಿದ್ದಾರೆ.

ಅತ್ತೆಯ ಮನೆಯಲ್ಲಿ ತನಗೆ ಆಗುತ್ತಿದ್ದ ಕಿರುಕುಳದ ಬಗ್ಗೆ ಆಕೆ ಪದೇ ಪದೇ ಹೇಳುತ್ತಿದ್ದಳು. ನಾನು ಅವಳನ್ನು ಭೇಟಿಯಾಗಲು ಹೋದಾಗ ತನಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಅಲ್ಲದೇ ತನ್ನ ಪ್ರಾಣಕ್ಕೆ ಅಪಾಯವಿದೆ ಎಂದೂ ತಿಳಿಸಿದ್ದಳು. ಅವಳು ಗರ್ಭಿಣಿಯಾಗಿದ್ದಳು. ನಮ್ಮ ಮಗಳಿಗೆ ನ್ಯಾಯ ಸಿಗಬೇಕು ಎಂದು ಮೃತ ಮಹಿಳೆಯ ತಾಯಿ ಆಗ್ರಹಿಸಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ತನಿಖೆಯ ವರದಿಯ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.