ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿ’ಯಾಗಿದೆ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗಿನ ಒಕ್ಕೂಟದಿಂದ ಹೊರನಡೆಯುವುದು ನಮ್ಮ ಪಕ್ಷ ಮತ್ತು ಕಾರ್ಯಕರ್ತರಿಗೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಬಂಡಾಯ ಬಣದ ಒಬ್ಬ ಶಿವಸೇನೆ ಶಾಸಕ ಬಂದು ತಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಸಮರ್ಥನೆಂದು ಹೇಳಿದರೆ ಸಿಎಂ ಸ್ಥಾನ ತ್ಯಜಿಸುವುದಾಗಿ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ ಬೆನ್ನಲ್ಲೇ ಶಿಂಧೆ ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 2019ರಲ್ಲಿ ಮಹಾ ವಿಕಾಸ್ ಅಘಾಡಿ ರಚನೆಯಾದಾಗಿನಿಂದ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿಗೆ ಮಾತ್ರ ಅನುಕೂಲವಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಸಾಮಾನ್ಯ ಶಿವಸೈನಿಕರು ತೊಂದರೆಗೆ ಈಡಾಗಿದ್ದಾರೆ. ಶಿವಸೈನಿಕರು ಮತ್ತು ಶಿವಸೇನೆಯ ಹಿತದೃಷ್ಟಿಯಿಂದ ಅಸಹಜ ಮೈತ್ರಿ ಕಡಿದುಕೊಳ್ಳುವುದು ಅವಶ್ಯವಾಗಿದೆ. ರಾಜ್ಯದ ಹಿತದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಬಂಡಾಯ ಶಾಸಕರ ಜೊತೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿಂಧೆ ಟ್ವೀಟ್ ಮಾಡಿದ್ದಾರೆ.

#Hindutvaforever ಎಂಬ ಹ್ಯಾಷ್ ಟ್ಯಾಗ್ ಬಳಸಿ ಮರಾಠಿಯಲ್ಲಿ ಶಿಂಧೆ ಟ್ವೀಟ್ ಮಾಡಿದ್ದಾರೆ.

ಎಂವಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಬಲವಾಗುತ್ತಿದ್ದರೆ, ಶಿವಸೇನೆ ದುರ್ಬಲವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.