ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಡೀ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ: ಕೇಜ್ರಿವಾಲ್

Published 22 ಮಾರ್ಚ್ 2024, 10:51 IST
Last Updated 22 ಮಾರ್ಚ್ 2024, 10:51 IST
ಅಕ್ಷರ ಗಾತ್ರ

ನವದೆಹಲಿ: ನನ್ನ ಇಡೀ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದರು.

ಇಂದು ಅವರನ್ನು ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಕೇಜ್ರಿವಾಲ್ ನೀಡಿದ ಪ್ರತಿಕ್ರಿಯೆಯನ್ನು ಸುದ್ದಿಸಂಸ್ಥೆ 'ಎಎನ್‌ಐ', ತನ್ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಹಂಚಿಕೊಂಡಿದೆ.

'ನಾನು ಒಳಗೆ ಅಥವಾ ಹೊರಗಿರಬಹುದು. ನನ್ನ ಇಡೀ ಜೀವನ ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ' ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಿಚಾರಣೆಗೆ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ. ಹೆಚ್ಚಿನ ವಿಚಾರಣೆ ನಡೆಸುವುದಕ್ಕಾಗಿ ಅವರನ್ನು ವಶಕ್ಕೆ ನೀಡುವಂತೆ ಕೋರಿ ಇ.ಡಿ, ನ್ಯಾಯಾಲಯದಲ್ಲಿ ಮನವಿ ಮಾಡಿದೆ.

ಮತ್ತೊಂದೆಡೆ ಇ.ಡಿಯಿಂದ ಬಂಧನಕ್ಕೊಳಗಾಗಿರುವ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ ಎಂದು ದೆಹಲಿಯ ಸಚಿವೆ ಅತಿಶಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT