ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಜೋರಾಂನಲ್ಲಿ ಮ್ಯಾನ್ಮಾರ್‌ ಸೇನಾ ವಿಮಾನ ಅಪಘಾತ: ಆರು ಜನರಿಗೆ ಗಾಯ

Published 23 ಜನವರಿ 2024, 10:50 IST
Last Updated 23 ಜನವರಿ 2024, 10:54 IST
ಅಕ್ಷರ ಗಾತ್ರ

ಲೆಂಗ್‌ಪುಯಿ: ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್‌ಗೆ ಸೇರಿದ ಸೇನಾ ವಿಮಾನ ಅಪಘಾತಕ್ಕೀಡಾಗಿದ್ದು, ಆರು ಜನ ಗಾಯಗೊಂಡಿದ್ದಾರೆ.

ಈ ಲಘು ವಿಮಾನದಲ್ಲಿ ಒಟ್ಟು 14 ಜನ ಪ್ರಯಾಣಿಸುತ್ತಿದ್ದರು ಎಂದು ಮೀಜೋರಾಂ ಡಿಜಿಪಿ ತಿಳಿಸಿದ್ದಾರೆ.

‘ಅಪಘಾತದಲ್ಲಿ ಒಟ್ಟು ಆರು ಜನ ಗಾಯಗೊಂಡಿದ್ದಾರೆ. ಉಳಿದ 8 ಜನ ಸುರಕ್ಷಿತವಾಗಿದ್ದಾರೆ. ಇವರನ್ನು ಲೆಂಗಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದಿದ್ದಾರೆ.

ವಿಮಾನವು ಲ್ಯಾಂಡ್ ಆಗುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ ಎಂದು ಡಿಜಿಪಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT