ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭೂಕುಸಿತ ಪೀಡಿತ ವಯನಾಡಿನಲ್ಲಿ ಕೇಳಿಬಂತು ನಿಗೂಢ ಶಬ್ದ; ಭೂಕಂಪದ ಭೀತಿ

Published : 9 ಆಗಸ್ಟ್ 2024, 9:24 IST
Last Updated : 9 ಆಗಸ್ಟ್ 2024, 9:24 IST
ಫಾಲೋ ಮಾಡಿ
Comments

ವಯನಾಡು (ಕೇರಳ): ಕೇರಳದ ಭೂಕುಸಿತ ಪೀಡಿತ ವಯನಾಡು ಜಿಲ್ಲೆಯ ಎಡಕ್ಕಲ್ ಪ್ರದೇಶದಲ್ಲಿ ಭೂಮಿಯಿಂದ ಹಲವರು ಬಾರಿ ನಿಗೂಢ ಶಬ್ದ ಕೇಳಿ ಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದೊಡ್ಡ ಶಬ್ದ ಉಂಟಾಗಿ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದ (ಕೆಎಸ್‌ಡಿಎಂಎ) ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪ ಸಂಭವಿಸಿರುವ ಬಗ್ಗೆ ಯಾವುದೇ ನಿದರ್ಶನ ಆಥವಾ ಕುರುಹುಗಳು ಸಿಕ್ಕಿಲ್ಲ. ಆದರೆ, ಸ್ಥಳೀಯರು ಆತಂಕಕ್ಕೊಳಗಾಗಿದ್ದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಿಗ್ಗೆ 10:15ರ ಸುಮಾರಿಗೆ ಶಬ್ದ ಕೇಳಿಸಿತು ಎಂದು ಪಂಚಾಯತಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಈಚೆಗೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ, 300ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT