ಮೈಸೂರು: ‘ಪಂಚ ರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹993 ಏರಿಕೆ ಮಾಡಿ, ಕೇಂದ್ರ ಸರ್ಕಾರ ತನ್ನ ನರಿ ಬುದ್ಧಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರುಣೆಯೇ ಇಲ್ಲ ಎನ್ನುವುದು ಸಾಬೀತಾಗಿದೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೆಲೆ ಏರಿಕೆ ಮಾಡಿರುವುದು ತೀವ್ರ ಖಂಡನೀಯ. ಸ್ವಾತಂತ್ರ್ಯ ಬಂದ ಬಳಿಕ ಯಾವ ಸರ್ಕಾರವೂ ಈ ಪ್ರಮಾಣದಲ್ಲಿ ಬೆಲೆ ಏರಿಸಿರಲಿಲ್ಲ. ಜನ ವಿರೋಧಿ ನೀತಿ ಮೂಲಕ ಆರ್ಥಿಕ ಹೊರೆ ಹೆಚ್ಚಿಸಿದೆ’ ಎಂದು ದೂರಿದ್ದಾರೆ.

‘ಚುನಾವಣಾ ಅವಧಿಯಲ್ಲಿ ಮೋದಿ ಸರ್ಕಾರವು ಉದ್ದೇಶಪೂರ್ವಕವಾಗಿ ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ ತಡೆದಿತ್ತು. ಮೊದಲೇ ಬೆಲೆ ಏರಿಸಿದ್ದರೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಅರಿತಿದ್ದ ಸರ್ಕಾರ, ಈಗ ಜಾಸ್ತಿ ಮಾಡಿ ಜನರ ರಕ್ತ ಹೀರುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಇದು ಅಧಿಕೃತ ಲೂಟಿಯೇ ಹೊರತು ಆಡಳಿತದ ಕ್ರಮವಲ್ಲ. ಈಗಾಗಲೇ ರೋಸಿಹೋಗಿರುವ ದೇಶದ ಜನರು ದಂಗೆ ಏಳುವ ಮುನ್ನವೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-39-337516367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.