ಮೈಸೂರು: ನವದೆಹಲಿಯ ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್ಐ) ಪ್ರಧಾನ ಕಚೇರಿಯಿಂದ ಪತ್ರಕರ್ತರು ಮತ್ತು ಸಿಬ್ಬಂದಿಯನ್ನು ಬಲವಂತವಾಗಿ ಹೊರ ಹಾಕಲಾಗಿರುವುದು ಖಂಡನೀಯ. ಈ ಘಟನೆಯು ಪತ್ರಿಕಾ ಸಂಸ್ಥೆಯ ಮೇಲಿನ ಕ್ರೂರ ದಾಳಿ ಮತ್ತು ದೇಶದಲ್ಲಿನ ಪತ್ರಿಕಾ ಸ್ವಾತಂತ್ರ್ಯದ ಆತಂಕಕಾರಿ ಬೆಳವಣಿಗೆ’ ಎಂದು ವಿಧಾನಪರಿಷತ್ ಸದಸ್ಯ ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

‘ಯುಎನ್ಐ ಕಚೇರಿ ಆವರಣದಲ್ಲಿ ಶುಕ್ರವಾರ ಸಂಜೆ ದೆಹಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳು ಪೂರ್ವ ಸೂಚನೆ ಇಲ್ಲದೆ ಸುದ್ದಿ ಕೊಠಡಿಗೆ ಪ್ರವೇಶಿಸಿ, ನೌಕರರನ್ನು ತಕ್ಷಣವೇ ಖಾಲಿ ಮಾಡುವಂತೆ ಹೇಳಿ, ಪತ್ರಕರ್ತರು ಮತ್ತು ಸಿಬ್ಬಂದಿಗೆ ಅವರ ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸಲೂ ಸಮಯ ನೀಡದೆ ಒತ್ತಡ ಹೇರಿದ್ದಾರೆ. ಮಹಿಳಾ ಉದ್ಯೋಗಿಗಳನ್ನು ಬಲವಂತವಾಗಿ ದೂಡಿ, ನಿಂದಿಸಿರುವುದು ಕಳವಳಕಾರಿ. ಇದು ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ’ ಎಂದಿದ್ದಾರೆ.

‘ಮಾಧ್ಯಮ ಸಂಸ್ಥೆಗಳನ್ನು ಗುರಿ ಯಾಗಿಸಿಕೊಂಡು ಈ ರೀತಿ ಕ್ರಮ ಕೈಗೊಳ್ಳುವುದು ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಾಳು ಮಾಡುತ್ತದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ಪತ್ರಕರ್ತರ ಹಕ್ಕು ರಕ್ಷಿಸುವ ಮತ್ತು ಸ್ವತಂತ್ರ ಸುದ್ದಿ ಸಂಸ್ಥೆಗಳ ನಿರಂತರ ಕಾರ್ಯನಿರ್ವಹಣೆ ಖಚಿತಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-39-677943193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.