ಮೈಸೂರು: ‘ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಶ್ರೀದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಸೂದೆ ಜೊತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಕೇಂದ್ರ ಮಂಡಿಸಿದ್ದರಿಂದ ಬಹುಮತ ದೊರೆಯಲಿಲ್ಲ. ಸರ್ಕಾರಕ್ಕೆ ಮಹಿಳೆಯರ ಮೇಲೆ ನಿಜವಾದ ಕಾಳಜಿ ಇದ್ದರೆ, ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಿ’ ಎಂದು ಹೇಳಿದ್ದಾರೆ.

‘ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸಮನಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಶೇ 33ರಷ್ಟು ಮೀಸಲಾತಿ ಕೊಟ್ಟರೂ ಅದು ಕಡಿಮೆಯೇ. ಹಾಗಾಗಿ, ಶೇ 50ರಷ್ಟು ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-39-1122614264

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.