ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು | ಪೊನ್ಮುಡಿಗೆ ಪ್ರಮಾಣ; ಸಿ.ಎಂ ಶಿಫಾರಸಿಗೆ ರಾಜ್ಯಪಾಲರ ನಕಾರ

Published 17 ಮಾರ್ಚ್ 2024, 22:14 IST
Last Updated 17 ಮಾರ್ಚ್ 2024, 22:14 IST
ಅಕ್ಷರ ಗಾತ್ರ

ಚೆನ್ನೈ: ಹಿರಿಯ ರಾಜಕಾರಣಿ ಕೆ.ಪೊನ್ಮುಡಿ ಅವರನ್ನು ಸಚಿವರಾಗಿ ನೇಮಿಸ
ಬೇಕು ಎಂಬ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರ ಶಿಫಾರಸನ್ನು ರಾಜ್ಯಪಾಲ ಆರ್.ಎನ್.ರವಿ ತಳ್ಳಿಹಾಕಿದ್ದಾರೆ. ಈ ಮೂಲ ಡಿಎಂಕೆ ಸರ್ಕಾರದೊಂದಿಗೆ ಸಂಘರ್ಷಕ್ಕೆ ಮುಂದಾಗಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಮದ್ರಾಸ್‌ ಹೈಕೋರ್ಟ್ ಪೊನ್ಮುಡಿ ಅವರಿಗೆ ಶಿಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಡಿಸೆಂಬರ್ 2023ರಲ್ಲಿ ಪೊನ್ಮುಡಿ ಅವರ ಶಾಸಕ ಸ್ಥಾನ ರದ್ದುಗೊಂಡಿತ್ತು. ಸುಪ್ರೀಂ ಕೋರ್ಟ್‌ ಮಾರ್ಚ್‌ 11ರಂದು ನೀಡಿದ್ದ ಆದೇಶದಲ್ಲಿ ಪೊನ್ಮುಡಿ ಅವರಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಹಿಂದೆಯೇ, ತಮಿಳುನಾಡು ವಿಧಾನಸಭೆ ಸ್ಪೀಕರ್ ಎಂ.ಅಪ್ಪಾವು ಅವರು ಪೊನ್ಮುಡಿ ಅವರನ್ನು ಶಾಸಕರಾಗಿ ಮರುನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು.

ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನ ಎದುರು ಇರುವ ಕಾರಣ ಸಚಿವರಾಗಿ ನಿಯುಕ್ತಿಗೊಳಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಪತ್ರ ಬರೆದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT