ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವಧಿ ವಿಸ್ತರಣೆ ಸಾಧ್ಯತೆ

Published 29 ಜೂನ್ 2024, 15:11 IST
Last Updated 29 ಜೂನ್ 2024, 15:11 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಅವರ ಅವಧಿ ಭಾನುವಾರ ಕೊನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸೇರಿರುವ ನಡ್ಡಾ ಅವರ ಪಕ್ಷದ ಅಧ್ಯಕ್ಷ ಹುದ್ದೆಯ ಅವಧಿ ಮತ್ತೊಮ್ಮೆ ವಿಸ್ತರಣೆ ಆಗುವ ಸಾಧ್ಯತೆ ಇದ್ದು, ಮುಂದಿನ ವರ್ಷದ ಜನವರಿವರೆಗೆ ಅವರು ಮುಂದುವರೆಯುತ್ತಾರೆ ಎಂದು ಮೂಲಗಳು ತಿಳಿಸಿವೆ.

ನಡ್ಡಾ ಅವರ ಮೂರು ವರ್ಷದ ಎರಡನೇ ಅವಧಿಯು ಜನವರಿ 2024ಕ್ಕೆ ಅಂತ್ಯಗೊಂಡಿತ್ತು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. 

‘ಪಕ್ಷದ ಆಂತರಿಕ ಚುನಾವಣೆಯು ದೀರ್ಘ ಪ್ರಕ್ರಿಯೆಯಾಗಿದೆ. ಪ್ರತಿ ರಾಜ್ಯ ಘಟಕವೂ ಹಲವು ಚುನಾವಣೆಗಳನ್ನು ನಡೆಸಬೇಕಾಗುತ್ತದೆ. ಅದಕ್ಕೆ ಎರಡರಿಂದ ಮೂರು ತಿಂಗಳು ಕಾಲ ಹಿಡಿಯುತ್ತದೆ. ನಡ್ಡಾಜೀ ಅದನ್ನೆಲ್ಲ ನೋಡಿಕೊಳ್ಳಲಿದ್ದಾರೆ’ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಇದೇ ವೇಳೆ, ಪಕ್ಷವು ಹಲವು ಮಂದಿ ಕಾರ್ಯಾಧ್ಯಕ್ಷರನ್ನು ನೇಮಿಸುವ ಸಾಧ್ಯತೆ ಹೆಚ್ಚಾಗಿದೆ. ಅಮಿತ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡ್ಡಾ ಕಾರ್ಯಾಧ್ಯಕ್ಷರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT