ಪುದುಚೇರಿ: ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಭ್ರಷ್ಟ ಮುಕ್ತ, ಅಭಿವೃದ್ಧಿ ಕೇಂದ್ರಿತ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ವಿ. ನಾರಾಯಣಸಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಚಾರ ಹೆಚ್ಚಿದೆ. ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ 30 ಸ್ಥಾನಗಳ ಪೈಕಿ 23 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಓದಿ:ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮುನ್ನಡೆ

ಪುದುಚೇರಿಯಲ್ಲಿ ಮೊದಲ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಜೆ.ಪಿ.ನಡ್ಡಾ, ‘ಕಳೆದ 35 ವರ್ಷಗಳಿಂದ ಪುದುಚೇರಿಯಲ್ಲಿ ಕಾಂಗ್ರೆಸ್ ಆಡಳಿತದಡಿ ಶೇಕಡ 52 ರಷ್ಟು ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ. ಇಲ್ಲಿನ ಕಾಲೇಜುಗಳಲ್ಲೂ ಭ್ರಷ್ಟಚಾರ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರ ಹಲವು ಸಮಯದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೂಡ ನಡೆಸಿಲ್ಲ’ ಎಂದು ಅವರು ಹೇಳಿದರು.

‘ಮಾಜಿ ಪ್ರಧಾನಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಪುದುಚೇರಿಗೆ ಕೇಂದ್ರದಿಂದ ಶೇಕಡ 70 ರಷ್ಟು ಅನುದಾನ ನೀಡಲಾಗಿತ್ತು. ಆದರೆ ಕೇಂದ್ರದಲ್ಲಿ ನಾರಾಯಣ ಸ್ವಾಮಿ ಅವರು ಸಚಿವರಾಗಿದ್ದಾಗ ಈ ಅನುದಾನವನ್ನು ಶೇಕಡ 30 ರಷ್ಟಕ್ಕೆ ಇಳಿಸಲಾಯಿತು’ ಎಂದು ಅವರು ದೂರಿದರು.

ಓದಿ:ಎಐಎಂಐಎಂ ಅನ್ನು ‘ಬಿಜೆಪಿಯ ಬಿ ಟೀಂ’ ಎಂದ ಕಾಂಗ್ರೆಸ್-ಟಿಎಂಸಿ ವಿರುದ್ಧ ಓವೈಸಿ ಕಿಡಿ

ಈ ವರ್ಷ ಏಪ್ರಿಲ್ ಅಥವಾ ಮೇ ತಿಂಗಳ ಆರಂಭದಲ್ಲಿ ಪುದುಚೇರಿಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.