ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, 18 ಜನರು ಮೃತಪಟ್ಟು, 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಕಟೋಲ್ ತಾಲ್ಲೂಕಿನ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಾರ್ಖಾನೆ ‘ಎಸ್ಬಿಎಲ್ ಎನರ್ಜಿ ಲಿಮಿಟೆಡ್’ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳು ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದು, ಡಿಎನ್ಎ ಪರೀಕ್ಷೆಗಾಗಿ ಕುಟುಂಬಸ್ಥರ ಮಾದರಿಯನ್ನು ಪಡೆಯಲಾಗುತ್ತಿದೆ’ ಎಂದು ಹೇಳಿದರು.

ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ದುರಂತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ. ‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ’ ಎಂದು ಫಡಣವೀಸ್ ಅವರು ತಿಳಿಸಿದರು.
.ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ.ಖಮೇನಿ ನಿಧನ ವಾರ್ತೆ ಪ್ರಕಟಿಸುವಾಗ ಭಾವುಕರಾದ ಇರಾನ್ ಟಿವಿ ನಿರೂಪಕ.
ಪ್ಯಾಕಿಂಗ್ ಘಟಕದಲ್ಲಿ ಸ್ಫೋಟ

‘ಕಾರ್ಖಾನೆಯ ಪ್ಯಾಕಿಂಗ್ ಘಟಕದಲ್ಲಿ ಬೆಳಿಗ್ಗೆ 7ರಿಂದ 7.15ರ ಸುಮಾರಿಗೆ ದುರಂತ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಗೆ ನಾವು ಸಂಪೂರ್ಣವಾಗಿ ಸಹಕರಿಸುತ್ತೇವೆ’ ಎಂದು ಎಸ್ಬಿಎಲ್ ಎನರ್ಜಿ ಲಿಮಿಟೆಡ್ ಹೇಳಿಕೆಯಲ್ಲಿ ತಿಳಿಸಿದೆ.

‘ಘಟನೆ ಬಗ್ಗೆ ಆಂತರಿಕ ತನಿಖೆಯೂ ನಡೆಯುತ್ತಿದೆ. ತನಿಖೆಯ ಅಂಶಗಳ ಆಧಾರದಲ್ಲಿ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಸಂತ್ರಸ್ತ ಉದ್ಯೋಗಿಗಳು ಮತ್ತು ಅವರ ಕುಟುಂಬಸ್ಥರಿಗೆ ಎಲ್ಲ ರೀತಿಯ ನೆರವು ನೀಡುವುದು ನಮ್ಮ ತಕ್ಷಣದ ಆದ್ಯತೆ. ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಆರ್ಥಿಕ ನೆರವು ನೀಡುತ್ತಿದ್ದೇವೆ. ಗಾಯಾಳುಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನೂ ಭರಿಸುತ್ತೇವೆ’ ಎಂದು ತಿಳಿಸಿದೆ.
.ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.