ನಾಗ್ಪುರ: ಇಲ್ಲಿನ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಎರಡನೇ ದಿನವೂ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿದ್ದು ನಗರದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ. ಘಟನೆ ಸಂಬಂಧ 51 ಜನರನ್ನು ಬಂಧಿಸಲಾಗಿದೆ ಎಂದು ನಾಗ್ಪುರದ ಪೊಲೀಸ್ ಆಯುಕ್ತ ಡಾ. ರವೀಂದ್ರ ಸಿಂಘಾಲ್ ತಿಳಿಸಿದರು.

ಘಟನೆಯ ಪ್ರಮುಖ ಸೂತ್ರಧಾರಿ ಎನ್ನಲಾದ ಸ್ಥಳೀಯ ರಾಜಕೀಯ ಮುಖಂಡ ಫಾಹಿಮ್ ಖಾನ್ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಖಾನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಬಿಜೆಪಿಯ ನಿತಿನ್ ಗಡ್ಕರಿ ವಿರುದ್ಧ ನಾಗ್ಪುರ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಏನಿದು ಘಟನೆ?

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆರವು ಮಾಡುವಂತೆ ಆಗ್ರಹಿಸಿ ಬಲಪಂಥೀಯ ಸಂಘಟನೆಗಳು (ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ) ಪ್ರತಿಭಟನೆ ನಡೆಸಿದ್ದವು. ಈ ಸಂದರ್ಭದಲ್ಲಿ ಸಮಾಧಿ ಪ್ರತಿಕೃತಿಗೆ ಬೆಂಕಿ ಹಚ್ಚಲಾಗಿತ್ತು. ಆದರೆ ಪ್ರತಿಭಟನೆಯಲ್ಲಿ ಸಮುದಾಯವೊಂದರ ಪವಿತ್ರ ಗ್ರಂಥಕ್ಕೆ ಬೆಂಕಿ ಹಾಕಲಾಗಿದೆ ಎಂಬ ವದಂತಿ ಹರಡಿದ ನಂತರ ನಾಗ್ಪುರದ ಮಹಲ್ ಪ್ರದೇಶದ ಚಿಟನಿಸ್ ಪಾರ್ಕ್ನಲ್ಲಿ ಸೋಮವಾರ ಸಂಜೆ 7.30ರ ಸುಮಾರಿಗೆ ಹಿಂಸಾಚಾರ ಆರಂಭವಾಗಿತ್ತು. ನೂರಾರು ಜನರ ಗುಂಪು ಪೊಲೀಸರತ್ತ ಕಲ್ಲು ತೂರಾಟ ನಡೆಸಿ, ಕೆಲವೆಡೆ ಪೆಟ್ರೋಲ್ ಬಾಂಬ್ ಎಸೆದಿತ್ತು.

ನಂತರ ಹಂಸಪುರಿ ಪ್ರದೇಶದಲ್ಲಿ ರಾತ್ರಿ ಹಿಂಸಾಚಾರ ಭುಗಿಲೆದ್ದಿತ್ತು. ಉದ್ರಿಕ್ತ ಗುಂಪು ಹಲವು ವಾಹನಗಳಿಗೆ ಬೆಂಕಿ ಇಟ್ಟಿತ್ತು. ಆ ಪ್ರದೇಶದ ಮನೆಗಳು ಮತ್ತು ಕ್ಲಿನಿಕ್ಗಳಿಗೆ ಬೆಂಕಿ ಇಟ್ಟು, ಧ್ವಂಸಗೊಳಿಸಿತು. ಹಿಂಸಾಚಾರದಲ್ಲಿ ಮೂವರು ಉಪ ಪೊಲೀಸ್ ಆಯುಕ್ತರು ಸೇರಿ 33 ಪೊಲೀಸ್ ಸಿಬ್ಬಂದಿ ಹಾಗೂ ಐವರು ನಾಗರಿಕರು ಗಾಯಗೊಂಡಿದ್ದಾರೆ.
.ನಾಗ್ಪುರ ಗಲಭೆ : ಸೂತ್ರಧಾರಿ ಬಂಧನ.ನಾಗ್ಪುರ ಹಿಂಸಾಚಾರ: ಮಹಿಳಾ ಕಾನ್ಸ್ಟೆಬಲ್ ಮೇಲೆ ಗಲಭೆಕೋರರಿಂದ ಲೈಂಗಿಕ ದೌರ್ಜನ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.