ಮುಂಬೈ: ಮಹಾರಾಷ್ಟ್ರದ ನಾಗ್ಪುರದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಭಾನುವಾರ ದೃಢಪಟ್ಟಿದೆ. ನಾಗ್ಪುರದಲ್ಲಿ ವರದಿಯಾದ ಮೊದಲ ಓಮೈಕ್ರಾನ್ ಪ್ರಕರಣ ಇದಾಗಿದೆ.

ಪಶ್ಚಿಮ ಆಫ್ರಿಕಾದಿಂದ ವಾಪಸಾದ 40 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮೈಕ್ರಾನ್ ಪತ್ತೆಯಾಗಿದೆ. ಇದರೊಂದಿಗೆ, ಮಹಾರಾಷಷ್ಟ್ರದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸೋಂಕಿತ ವ್ಯಕ್ತಿಯು ಸ್ಥಳೀಯ ನಿವಾಸಿಯಾಗಿದ್ದು, 8 ದಿನಗಳ ಹಿಂದೆ ಪಶ್ಚಿಮ ಆಫ್ರಿಕಾದಿಂದ ವಾಪಸಾಗಿದ್ದರು. ಆ ಸಂದರ್ಭದಲ್ಲಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿತ್ತು’ ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ಆಯುಕ್ತ ರಾಧಾಕೃಷ್ಣನ್ ಬಿ ತಿಳಿಸಿದ್ದಾರೆ.

ಓದಿ:ರಾಜ್ಯದಲ್ಲಿ ಮೂರನೇ ಓಮೈಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ ಒಟ್ಟು 36 ಸೋಂಕಿತರು

ಕೋವಿಡ್ ದೃಢಪಟ್ಟ ಕಾರಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರಿಂದ ಪಡೆದ ಮಾದರಿಯನ್ನು ಓಮೈಕ್ರಾನ್ ಪತ್ತೆಗಾಗಿ ಜೀನೋಮ್ ಸೀಕ್ವೆನ್ಸ್‌ಗೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಸೋಂಕು ದೃಢಪಟ್ಟಿದೆ. ಆದರೆ ಅವರ ಸಂಪರ್ಕಕ್ಕೆ ಬಂದಿದ್ದವರೆಲ್ಲರ ವರದಿಯೂ ನೆಗೆಟಿವ್ ಬಂದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಭಾನುವಾರ ಓಮೈಕ್ರಾನ್ ಮೂರನೇ ಪ್ರಕರಣ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.