ನವದೆಹಲಿ: ವಿಶ್ವದ ವಿವಿಧ ದೇಶಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿರುವ ಸಂಬಂಧವನ್ನು ಉಲ್ಲೇಖಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ‘ಮೋದಿ ಅವರು ಅಸಾಧ್ಯವಾದದ್ದನ್ನು ಸಾಧಿಸಬಲ್ಲರು’ ಎಂದು ಹೇಳಿದ್ದಾರೆ.

ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಮೊದಲ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಸೋಮವಾರ ಮಾತನಾಡಿದ ಅವರು, ‘ಭಾರತದ ಸರಕುಗಳ ಮೇಲೆ ಶೇಕಡ 50ರಷ್ಟು ಆಮದು ಸುಂಕ ವಿಧಿಸಿದ್ದರೂ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೋದಿ ಅವರನ್ನು ಯಾವಾಗಲೂ ಉತ್ತಮ ಸ್ನೇಹಿತ ಎಂದು ಶ್ಲಾಘಿಸಿದ್ದಾರೆ’ ಎಂದರು.

‘ಅದೇ ರೀತಿ, ಅಂತರರಾಷ್ಟ್ರೀಯ ರಾಜಕೀಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಭಿನ್ನಾಭಿಪ್ರಾಯ ಇದ್ದರೂ ಚೀನಾ ಪ್ರಧಾನಿ ಷಿ ಜಿನ್ಪಿಂಗ್ ಅವರು ಮೋದಿ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ. ರಷ್ಯಾದ ಪ್ರಧಾನಿಯೂ ಮೋದಿ ಅವರ ಉತ್ತಮ ಸ್ನೇಹಿತರಾಗಿದ್ದಾರೆ. ಆದ್ದರಿಂದಲೇ ಅವರು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಬಲ್ಲರು’ ಎಂದು ಹೇಳಿದರು.

ಮೋದಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ‘ಪ್ರಧಾನಿ ಅವರು ಜನಸಾಮಾನ್ಯರ ಏಳಿಗೆಗಾಗಿ ಕೆಲಸ ಮಾಡುತ್ತಾರೆ. ಅದಕ್ಕೆ ಯಾವುದೇ ಪ್ರತಿಫಲಾಪೇಕ್ಷೆ ನಿರೀಕ್ಷಿಸುವುದಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.