ಬೆಂಗಳೂರು: ‘ಪಶ್ಚಿಮ ಬಂಗಾಲ ಸೇರಿ ವಿವಿಧ ರಾಜ್ಯಗಳಲ್ಲಿ ಬಿಜೆಪಿಗೆ ದೊಡ್ಡ ಗೆಲುವು ತಂದು ಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೇ 10 ರಂದು ನಗರಕ್ಕೆ ಭೇಟಿ ನೀಡುತ್ತಿದ್ದು, ಜನರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರುಹೇಳಿದರು.

ಎಚ್ಎಎಲ್ ಬಳಿ ನಡೆಯುವ ಕಾರ್ಯಕ್ರಮದ ಪೂರ್ವ ತಯಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ‘ಮೋದಿ ಅವರ ವರ್ಚಸ್ಸು, ಅವರ ಜಾಣ್ಮೆ, ಚಾಣಕ್ಯತನ ನಮಗೆ ಉಪಯೋಗವಾಗಿದೆ. ವಿಮಾನ ನಿಲ್ದಾಣದಲ್ಲಿ 30 ನಿಮಿಷ ಭಾಷಣ ಮಾಡುತ್ತಾರೆ. ಪ್ರಧಾನಿಗೆ ಮೈಸೂರು ಪೇಟ ತೊಡಿಸಿ, ರೇಷ್ಮೆ ಶಾಲು ಹೊದಿಸಿ ಗೌರವಿಸಲಾಗುವುದು. ಸುಮಾರು 15-20 ಸಾವಿರ ಜನರು ಬರಲಿದ್ದಾರೆ’ ಎಂದು ಹೇಳಿದರು.

ಮಾಜಿ ಸಚಿವ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಮಾಜಿ ಮೇಯರ್ ಗೌತಮ್ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-2055009769

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.