ನವದೆಹಲಿ: ‘ಜನರ ಜೀವನವು 2047ರ ವೇಳೆಗೆ ಇನ್ನಷ್ಟು ಆರಾಮದಾಯಕ ಆಗುವಂತೆ ಗುರಿಗಳನ್ನು ನಿಗದಿಪಡಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚಿಸಿದರು.

ಗುರುವಾರ ಇಲ್ಲಿ ನಡೆದ ಕೇಂದ್ರ ಮಂತ್ರಿ ಪರಿಷತ್ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ‘ಹೊಸ ತಲೆಮಾರಿನ ಸುಧಾರಣಾ ಕ್ರಮಗಳಿಗೆ ಆದ್ಯತೆ ನೀಡಬೇಕು. ಇದರಿಂದ 2047ರಲ್ಲಿ ಭಾರತವು ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವ ಹೊತ್ತಿಗೆ ಸರ್ವತೋಮುಖ ಅಭಿವೃದ್ಧಿ ಸಾಧಿಸಬಹುದು’ ಎಂದರು.

‘ಜನರ ಜೀವನದಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ, ಅವರ ಜೀವನ ಮಟ್ಟ ಸುಧಾರಿಸಲು ಮತ್ತು ಜೀವನ ಸುಗಮಗೊಳಿಸುವುದರ ಕುರಿತು ಗುರಿಗಳನ್ನು ನಿಗದಿಪಡಿಸಬೇಕು ಎಂದು ಪುನರುಚ್ಚರಿಸಿದ ಪ್ರಧಾನಿ, 2047ರ ವೇಳೆಗೆ ದೇಶವು ಅಭಿವೃದ್ಧಿ ಸಾಧಿಸಲು ಕೈಗೊಳ್ಳಬೇಕಿರುವ ಸುಧಾರಣಾ ಉಪ ಕ್ರಮಗಳ ಬಗ್ಗೆ ಸಭೆಯಲ್ಲಿ ಸ್ಪಷ್ಟ ಮುನ್ನೋಟ ನೀಡಿದರು ಎಂದು ಮೂಲಗಳು ಹೇಳಿವೆ.

‘ಹಿಂದೆ ಏನು ಮಾಡಲಾಗಿದೆ ಎನ್ನುವುದರ ಬಗ್ಗೆ ಯೋಚಿಸದೆ, ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಯೋಚಿಸಿ, ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಗರಿಷ್ಠ ಪ್ರಯೋಜನವನ್ನು ಜನರು ಪಡೆಯುವಂತೆ ಕ್ರಮ ಕೈಗೊಳ್ಳಿ’ ಎಂದು ಸಚಿವರಿಗೆ ಸೂಚಿಸಿದರು.

ಮೋದಿ ಅವರ ಐದು ರಾಷ್ಟ್ರಗಳ ಪ್ರವಾಸದ ಬಗ್ಗೆ ವಿದೇಶಾಂಗ ಸಚಿವ ಎಸ್. ಜಯಶಂಕರ್ ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-4-1397671312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.