ನವದೆಹಲಿ: ಸೆಪ್ಟೆಂಬರ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್ಜಿಎ) ವಾರ್ಷಿಕ ಉನ್ನತ ಮಟ್ಟದ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ಭಾಷಣಕಾರರ ತಾತ್ಕಾಲಿಕ ಪಟ್ಟಿಯನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನವು ಸೆಪ್ಟೆಂಬರ್ 9ರಂದು ಆರಂಭವಾಗಲಿದೆ. ಸೆಪ್ಟೆಂಬರ್ 23ರಿಂದ 29ರವರೆಗೆ ಉನ್ನತ ಮಟ್ಟದ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 23ರಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸೆಪ್ಟೆಂಬರ್ 26ರಂದು ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿವೆ.

ಬ್ರೆಜಿಲ್, ಇಸ್ರೇಲ್, ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥರು ಸಹ ಅದೇ ದಿನ ಯುಎನ್ಜಿಎ ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವರ್ಷದ ಫೆಬ್ರುವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಎರಡನೇ ಅವಧಿಗೆ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಜತೆಗೆ, ರಕ್ಷಣಾ ವ್ಯವಸ್ಥೆಯ ಬಲವರ್ಧನೆ, ವಾಣಿಜ್ಯ-ವ್ಯಾಪಾರ, ಇಂಧನ, ಮೂಲಸೌಕರ್ಯ, ತಂತ್ರಜ್ಞಾನ ವೃದ್ಧಿ ಸೇರಿದಂತೆ ವ್ಯಾಪಾರ ಒಪ್ಪಂದದ ಮೊದಲ ಹಂತದ ಮಾತುಕತೆ ನಡೆಸುವ ಯೋಜನೆಯನ್ನು ಘೋಷಿಸಿದ್ದರು.

ಈಚೆಗೆ ರಷ್ಯಾದಿಂದ ತೈಲ ಖರೀದಿಸುವ ವಿಚಾರವಾಗಿ ಅಮೆರಿಕದ ಬೆದರಿಕೆಗೆ ಭಾರತ ಮಣಿಯದ ಬೆನ್ನಲ್ಲೇ, ಅಮೆರಿಕ ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇಕಡ 25ರಷ್ಟು ಸುಂಕ ಹೇರುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದರು.

ವಿನಾಯಿತಿ ಪಟ್ಟಿಯಲ್ಲಿರುವ ಕೆಲ ಸರಕುಗಳನ್ನು ಹೊರತುಪಡಿಸಿದಂತೆ, ಭಾರತದ ಮೇಲೆ ಹೇರಲಾದ ಸುಂಕದ ಪ್ರಮಾಣ ಶೇ 50ಕ್ಕೆ ಏರಿದಂತಾಗಿದೆ. ಟ್ರಂಪ್ ಅವರ ಈ ನಡೆಯು, ಜವಳಿ, ಸಾಗರ ಹಾಗೂ ಚರ್ಮ ಉತ್ಪನ್ನಗಳ ರಫ್ತಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತದಿಂದ ಅಮೆರಿಕಕ್ಕೆ ₹7.5 ಲಕ್ಷ ಕೋಟಿ (86 ಶತ ಕೋಟಿ ಡಾಲರ್) ಮೌಲ್ಯದಷ್ಟು ಸರಕುಗಳ ರಫ್ತು ಆಗುತ್ತದೆ. ಹೆಚ್ಚುವರಿ ಸುಂಕ ಈ ರಫ್ತಿನ ಮೇಲೆ ಭಾರಿ ಪರಿಣಾಮ ಬೀರಲಿದೆ ಎಂದು ರಫ್ತುದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು, ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾಕ್ಕೆ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ಟ್ರಂಪ್ ದೂರಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಭೇಟಿಯಾಗುತ್ತಿರುವುದು ಮಹತ್ವ ಪಡೆದುಕೊಂಡಿದೆ.
.ವ್ಯಾಪಾರ ಒಪ್ಪಂದ ಕುರಿತ ಮಾತುಕತೆಗೆ ಭಾರತ ಅಸಹಕಾರ: ಅಮೆರಿಕ.ಚೀನಾ ಮೇಲೆ ಸುಂಕ: ಟ್ರಂಪ್ ನಿರ್ಧಾರ ಅಂತಿಮವಾಗಿಲ್ಲ; ಜೆ.ಡಿ. ವ್ಯಾನ್ಸ್.ಅಮೆರಿಕದ ಸುಂಕ ಪ್ರಹಾರದಿಂದ ಭಾರತದ ಶೇ 55ರಷ್ಟು ಉತ್ಪನ್ನಗಳ ಮೇಲೆ ಪರಿಣಾಮ: ಕೇಂದ್ರ.ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ–ಪುಟಿನ್ ಮಾತುಕತೆ: ಭಾರಿ ಕುತೂಹಲ.ಭಾರತಕ್ಕೆ ಶೇ 50ರಷ್ಟು ಸುಂಕ: ಅಮೆರಿಕ ಸಮರ್ಥನೆ .ಶೇ 50ರಷ್ಟು ಸುಂಕ | ಸಣ್ಣ ಉದ್ದಿಮೆಗಳಿಗೆ ಸಮಸ್ಯೆ: ರತ್ನ ಆಭರಣ ಉದ್ಯಮಕ್ಕೆ ಪೆಟ್ಟು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.