ಕಲ್ಯಾಣ್ ಸಿಂಗ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ಅಲಿಗಢದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾ, 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಸ್ಥಾನಗಳನ್ನು ಗೆಲ್ಲುವ ಮೂಲಕ ಕಲ್ಯಾಣ್ ಸಿಂಗ್ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದು, ಕಲ್ಯಾಣ್ ಸಿಂಗ್ ಅವರನ್ನು ಸ್ಮರಿಸಿದರು.