ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕ್ರಿಸ್‌ಮಸ್‌ ಸಂದೇಶ: ಸಮಾಜದಲ್ಲಿ ಸಾಮರಸ್ಯ, ಸಂತೋಷ ಹೆಚ್ಚಲಿ

Last Updated 25 ಡಿಸೆಂಬರ್ 2022, 2:58 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯ ಕೋರಿದ್ದಾರೆ.

‘ಮೆರ್ರಿ ಕ್ರಿಸ್‌ಮಸ್‌! ಈ ವಿಶೇಷ ದಿನ ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸಂತೋಷದ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ. ಭಗವಂತ ಕ್ರಿಸ್ತನಉದಾತ್ತ ಚಿಂತನೆಗಳನ್ನು ಆದರ್ಶವಾಗಿಟ್ಟುಕೊಂಡು ಸಮಾಜಕ್ಕೆ ಸೇವೆ ಸಲ್ಲಿಸಲು ಒತ್ತು ನೀಡೋಣ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಪ್ರತಿಯೊಬ್ಬರೂ ರಜಾದಿನಗಳಲ್ಲಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತದೆ ಎಂದು ನಾನು ಮತ್ತುಜಿಲ್ಭಾವಿಸುತ್ತೇವೆ. ಶಾಂತಿಯುತ ಕ್ರಿಸ್‌ಮಸ್‌ ಈವ್ ಆಚರಣೆಗಾಗಿ ನಾವು ನಿಮಗೆ ಶುಭ ಹಾರೈಸುತ್ತೇವೆ’ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಟ್ವೀಟ್ ಮಾಡಿದ್ದಾರೆ.

ಪೋಪ್ ಫ್ರಾನ್ಸಿಸ್ ಸೇರಿದಂತೆ ವಿಶ್ವದ ಹಲವು ಗಣ್ಯರು ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಶುಭ ಕೋರಿದ್ದಾರೆ.

ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಡಿ.24ರ ಮಧ್ಯರಾತ್ರಿಯಿಂದಲೇ ಕ್ರಿಸ್‌ಮಸ್ ಸಂಭ್ರಮ ಆರಂಭವಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT