ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜುಲೈ ಅಂತ್ಯದಲ್ಲಿ ಮಾಲ್ಡೀವ್ಸ್ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

2023ರ ನವೆಂಬರ್ನಲ್ಲಿ ಮೊಹಮ್ಮದ್ ಮುಯಿಝು ಮಾಲ್ಡೀವ್ಸ್ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ದ್ವೀಪ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿರಲಿದೆ.
.ಆಪರೇಷನ್ ಸಿಂಧೂರ | ಸರ್ವಪಕ್ಷಗಳ ನಿಯೋಗ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ.ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಸುರಕ್ಷಿತವಾಗಿದೆ: ಜೆ.ಪಿ. ನಡ್ಡಾ.
ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಖಲೀಲ್ ಅವರು ಮಾಲ್ಡೀವ್ಸ್ನ ಸ್ವಾತಂತ್ರ್ಯ ದಿನ ಕಾರ್ಯಾಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 26ರಂದು ಮಾಲ್ಡೀವ್ಸ್ನ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಇದೇ 13ರಂದು ವಿದೇಶಾಂಗ ಸಚಿವರ ಸಭೆಗಾಗಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಚೀನಾಗೆ ಭೇಟಿ ನೀಡುತ್ತಿದ್ದಾರೆ. 2022ರ ಗಲ್ವಾನ್ ಘರ್ಷಣೆಯ ನಂತರ ಭಾರತೀಯ ವಿದೇಶಾಂಗ ಸಚಿವರು ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಆಪರೇಷನ್ ಸಿಂಧೂರದ ಬಳಿಕ ಭಾರತವು ಪಾಕಿಸ್ತಾನದೊಂದಿಗೆ ಒಂದೇ ಸಭೆಯಲ್ಲಿ ಭಾಗವಹಿಸುತ್ತಿರುವುದೂ ಇದೇ ಮೊದಲು.

ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
.ಬಿಹಾರಕ್ಕೆ 50ನೇ ಭೇಟಿ: ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಸಾಧನೆ.ರಾಷ್ಟ್ರವನ್ನುದ್ದೇಶಿಸಿ ಇಂದು ರಾತ್ರಿ 8ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.