ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್ 12ರಿಂದ 14ರವರೆಗೆ ಮಿಜೋರಾಂ ಹಾಗೂ ಅಸ್ಸಾಂ ರಾಜ್ಯದೊಂದಿಗೆ ಮಣಿಪುರ ಪ್ರವಾಸವನ್ನು ಪ್ರಧಾನಿ ಕೈಗೊಳ್ಳುವ ಸಾಧ್ಯತೆಯಿದ್ದು, ಪ್ರಮುಖ ಮೂಲಸೌಕರ್ಯಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ರಾಜಧಾನಿ ಇಂಫಾಲ ಹಾಗೂ ಚುರಾಚಾಂದ್ಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ.

ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ 2023ರ ಮೇ 3ರಂದು ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ಆರಂಭವಾಗಿತ್ತು. ಆದರೆ ಕಳೆದೆರಡು ತಿಂಗಳಲ್ಲಿ ಹಿಂಸಾಚಾರದ ಯಾವುದೇ ಘಟನೆಗಳು ವರದಿಯಾಗಿಲ್ಲ.

ಫೆಬ್ರುವರಿ 13ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಇನ್ನೊಂದೆಡೆ ಪ್ರಧಾನಿ ಭೇಟಿ ನೀಡದೇ ಇರುವುದನ್ನು ಕಾಂಗ್ರೆಸ್ ನಿರಂತರವಾಗಿ ಟೀಕೆ ಮಾಡುತ್ತಲೇ ಬಂದಿದೆ.
.ಶಾಂಘೈ ಶೃಂಗಸಭೆ: ದ್ವಿಪಕ್ಷೀಯ ಸಭೆ ನಡೆಸಿದ ಮೋದಿ–ಜಿನ್ಪಿಂಗ್.Quad Summit | ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಇಲ್ಲ: ವರದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.