ನವದೆಹಲಿ: ‘ರಾಷ್ಟ್ರ ಅಭಿವೃದ್ಧಿಗೆ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ನೀಡಿದ ಕೊಡುಗೆಯನ್ನು ದೇಶ ಸದಾ ಸ್ಮರಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪಿ.ವಿ ನರಸಿಂಹರಾವ್ ಅವರ 100 ನೇ ಜನ್ಮ ದಿನಾಚರಣೆಯ ಅಂಗವಾಗಿ ಗೌರವ ನಮನ ಸಲ್ಲಿಸಿದ ಅವರು, ‘ಭಾರತವು ಅವರ ಕೊಡುಗೆಯನ್ನು ಸದಾ ಸ್ಮರಿಸಲಿದೆ. ಪಿ.ವಿ ನರಸಿಂಹರಾವ್ ಅವರು ಅಪಾರ ಜ್ಞಾನ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದರು’ ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಜೂನ್ ತಿಂಗಳ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪಿ.ವಿ ನರಸಿಂಹರಾವ್ ಅವರ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದ್ದರು. ಆ ವಿಡಿಯೊದ ತುಣಕನ್ನು ಮೋದಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ನ ಹಿರಿಯ ನಾಯಕ ರಾವ್ ಅವರು 1991–1996ರ ವರೆಗೆ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿದ ಕೀರ್ತಿಗೆ ರಾವ್ ಪಾತ್ರರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.