ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಪುಣ್ಯತಿಥಿ: ಮೋದಿ, ಸೋನಿಯಾ ಸೇರಿ ಗಣ್ಯರ ‌ನಮನ

Published 21 ಮೇ 2024, 4:53 IST
Last Updated 21 ಮೇ 2024, 4:53 IST
ಅಕ್ಷರ ಗಾತ್ರ

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 33ನೇ ಪುಣ್ಯತಿಥಿ. ಈ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ’ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಉಪಸ್ಥಿತರಿದ್ದರು. ಇದೇ ವೇಳೆ ಕಾಂಗ್ರೆಸ್ ನಾಯಕರಾದ ಪಿ. ಚಿದಂಬರಂ, ಸಚಿನ್ ಪೈಲೆಟ್ ಸೇರಿದಂತೆ ಅನೇಕರು ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ರಾಜೀವ್‌ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್‌ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. 1984ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ರಾಜೀವ್‌ ಗಾಂಧಿ ಹತ್ಯೆಗೀಡಾದರು.

2023ರಲ್ಲಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಅಪರಾಧಿ ಎ.ಜಿ.ಪೇರರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆ ಮಾಡಲಾಗಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಮಂದಿ ಅಪರಾಧಿಗಳಲ್ಲಿ ಪೇರರಿವಾಳನ್‌ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಡಿ ಪೇರರಿವಾಳನ್‌ ಅವರನ್ನು 1991ರ ಜೂನ್‌ 19ರಂದು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT