ಬಾದಾಮಿ: ‘ಭವಿಷ್ಯದಲ್ಲಿ ದೇಶದ ಅರ್ಥವ್ಯವಸ್ಥೆಗೆ ತೊಂದರೆಯಾಗದಂತೆ ಒಂದು ವರ್ಷ ಜನರು ಚಿನ್ನ ಖರೀದಿಸಬೇಡಿ ಮತ್ತು ಇಂಧನವನ್ನು ಮಿತವಾಗಿ ಬಳಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೆ ಕೆಲವರು ಟೀಕಿಸುವುದು ಸರಿಯೇ’ ಎಂದು ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದರು.

ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ₹2ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ವೀರಪುಲಿಕೇಶಿ ಸಹಕಾರ ಬ್ಯಾಂಕಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

‘ನಮ್ಮ ದೇಶದಲ್ಲಿ 2 ಟನ್ ಬಂಗಾರ ಉತ್ಪಾದನೆಯಾಗುತ್ತಿದೆ. ಹೊರದೇಶದಿಂದ ಶೇ 80 ರಷ್ಟು ಅಂದರೆ 700 ಟನ್ ಆಮದಾಗುವುದು. ರೂಪಾಯಿ ಮೌಲ್ಯ ಕುಸಿದಿದೆ. ಡಾಲರ್ ಮೌಲ್ಯ ಹೆಚ್ಚಾಗಿದೆ. ದೇಶಕ್ಕೆ ಆರ್ಥಿಕ ಹೊರೆಯಾಗುವ ಉದ್ದೇಶದಿಂದ ಪ್ರಧಾನಿ ತಿಳಿಸಿದ್ದಾರೆ. ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕಿದೆ’ ಎಂದರು.

‘ಸಹಕಾರ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಲ್ಲಿ ಪ್ರತ್ಯೇಕ ಸಚಿವಾಲಯವಿದೆ, 63 ಸಾವಿರ ಸೊಸೈಟಿಗಳನ್ನು ಸಹಕಾರ ನೀತಿಯಲ್ಲಿ ಗಣಕೀಕರಣ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸಚಿವ ಅಮಿತ್ ಷಾ ಹೊಸ ಸಹಕಾರ ನೀತಿಯನ್ನು ರಾಷ್ಟ್ರಮಟ್ಟದಲ್ಲಿ ತಂದಿದ್ದಾರೆ’ ಎಂದು ತಿಳಿಸಿದರು.

‘ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದ ಸಿದ್ದನಗೌಡ ಪಾಟೀಲ ಸಹಕಾರ ಕ್ರಾಂತಿಯನ್ನು ರಾಜ್ಯದಲ್ಲಿ ಮೊತ್ತ ಮೊದಲು ಆರಂಭಿಸಿದರು. ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದಲ್ಲಿ ಸಹಕಾರ ಕ್ಷೇತ್ರ ಬಲಿಷ್ಠವಾಗಿದೆ. ಸಹಕಾರ ಕ್ಷೇತ್ರದಲ್ಲಿ ನಿರ್ದೇಶಕರ ಪಾರದರ್ಶಕ ಆಡಳಿತ ಮತ್ತು ಸಿಬ್ಬಂದಿಯ ಪ್ರಾಮಾಣಿಕತೆ ಇರಬೇಕು’ ಎಂದು ಹೇಳಿದರು.

ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ‘ವೀರಪುಲಿಕೇಶಿ ಸಹಕಾರ ಬ್ಯಾಂಕ್ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಹಕಾರ ಬ್ಯಾಂಕ್ ಆಗಿದೆ’ ಎಂದರು.

ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಹಾವೇರಿ ಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ವೀರಪುಲಿಕೇಶಿ ಸಹಕಾರ ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ನಿರ್ದೇಶಕ ಮಂಡಳಿ ಸದಸ್ಯರು ವೇದಿಕೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-19-248040370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.