ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ 9ರಂದು ಸಂಜೆ 7.15ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ

Published 7 ಜೂನ್ 2024, 15:33 IST
Last Updated 7 ಜೂನ್ 2024, 15:33 IST
ಅಕ್ಷರ ಗಾತ್ರ

ನವದೆಹಲಿ: ಜೂನ್ 9 ರಂದು ಸಂಜೆ 7.15ಕ್ಕೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ.

ಈ ಬಗ್ಗೆ ಎಕ್ಸ್‌ ತಾಣದಲ್ಲಿ ರಾಷ್ಟಪತಿ ಭವನ ಮಾಹಿತಿ ನೀಡಿದೆ.

‘ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂನ್‌ 9ರ ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ’ ಎಂದು ಬರೆದುಕೊಂಡಿದೆ.‘

ಅಂದು ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ‍ಪ್ರಮಾಣಗೈಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT