ಡೆಹ್ರಾಡೂನ್: ಮಳೆ ಮತ್ತು ಪ್ರವಾಹ ಪೀಡಿತ ಉತ್ತರಾಖಂಡದ ಪ್ರದೇಶಗಳಿಗೆ ₹1,200 ಕೋಟಿ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿದ ಮೋದಿ, ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರವನ್ನು ಘೋಷಿಸಿದರು. ಅನಾಥ ಮಕ್ಕಳಿಗೆ ಪಿ.ಎಂ ಮಕ್ಕಳ ಕ್ಷೇಮಾಭಿವೃದ್ಧಿಯ ‘ಪಿ.ಎಂ.ಕೇರ್ಸ್’ ಯೋಜನೆಯಡಿ ಸಮಗ್ರ ಬೆಂಬಲ ನೀಡುವುದಾಗಿ ತಿಳಿಸಿದರು.

ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದರು.

ಡೆಹ್ರಾಡೂನ್ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣಕ್ಕೆ ಮೋದಿ ಅವರು ಆಗಮಿಸಿದಾಗ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಿ ಅವರನ್ನು ಬರಮಾಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.