ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ.
ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಕಚೇರಿಗೆ ತೆರಳುವ ಮುನ್ನ, ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಕಾನೂನನ್ನುಗೌರವಿಸುವ ನಾಗರಿಕ ಎಂದು ಹೇಳಿದ್ದಾರೆ.
ಸದ್ಯ, ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಹೊಣೆ ಹೊತ್ತಿರುವ ಶಿವಕುಮಾರ್, ಗುರುವಾರ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.
ಕಳೆದ ಸೆಪ್ಟೆಂಬರ್ 19ರಂದು ಇ.ಡಿ ಮುಂದೆ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದರು. ಆ ಸಂದರ್ಭ ಹಣ ಅಕ್ರಮ ವರ್ಗಾವಣೆ ಕುರಿತ ಮತ್ತೊಂದು ಪ್ರಕರಣದ ಕುರಿತು ವಿಚಾರಣೆ ನಡೆಸಲಾಗಿತ್ತು.
ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ವಿಚಾರಣೆ ನಡೆಸಲಾಗುತ್ತಿದೆ.
ಇದೇ ಪ್ರಕರಣದಲ್ಲಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪವನ್ ಬನ್ಸಾಲ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರ ವಿಚಾರಣೆಯನ್ನು ಇ.ಡಿ ನಡೆಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.