ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಜತೆ ನಂಟಿನ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ದೆಹಲಿಯ ನ್ಯಾಯಾಲಯ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ಆರೋಪಪಟ್ಟಿಯನ್ನು ಪರಿಗಣಿಸಿ, ಆರೋಪಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಾರಿ ನಿರ್ದೇಶನಾಲಯ(ಇ.ಡಿ), ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಇಬ್ಬರಿಗೂ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಿದರು.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್ 26ರಂದು ದಾಖಲಿಸಿದ್ದ ಖಾಸಗಿ ದೂರನ್ನು ಪಟಿಯಾಲಾ ಹೌಸ್ ನ್ಯಾಯಾಲಯದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ 2021ರಲ್ಲಿ ವಿಚಾರಣೆ ಆರಂಭಿಸಿದ್ದ ಇ.ಡಿ ಕಳೆದ ತಿಂಗಳ 15ರಂದು ಇಬ್ಬರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.
.PHOTOS | ‘ವೇವ್ಸ್’ ಶೃಂಗದಲ್ಲಿ ನಟಿ ಶೋಭಿತಾ ಧೂಲಿಪಾಲ ಹವಾ.ವಿಝಿಂಜಂ ಬಂದರು ಉದ್ಘಾಟಿಸಿದ ಮೋದಿ: ನವಯುಗದ ಅಭಿವೃದ್ಧಿಯ ಸಂಕೇತ ಎಂದು ಬಣ್ಣನೆ.ವಾಘಾ ಗಡಿ ಮೂಲಕ ಪ್ರಜೆಗಳು ದೇಶಕ್ಕೆ ಮರಳಬಹುದು: ಪಾಕಿಸ್ತಾನ.SSLC Result 2025: ಎರಡನೇ ಸ್ಥಾನಕ್ಕಿಳಿದ ಉಡುಪಿ.
ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ನ (ಎಜೆಎಲ್) ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಸ್ವಾಧೀನಕ್ಕೆ ಪಡೆಯುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೊಡಾ, ಸುಮನ್ ದುಬೆ ಮತ್ತು ಇತರ ಕಾಂಗ್ರೆಸ್ ನಾಯಕರು ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ; ಯಂಗ್ ಇಂಡಿಯನ್ ಲಿಮಿಟೆಡ್ ಮೂಲಕ, ₹2,000 ಕೋಟಿ ಮೌಲ್ಯದ ಆಸ್ತಿಯನ್ನು ಸೋನಿಯಾ ಮತ್ತು ರಾಹುಲ್ ಅವರು ಕೇವಲ ₹50 ಲಕ್ಷಕ್ಕೆ ಸ್ವಾಧೀನ ಪಡಿಸಿಕೊಂಡಿದ್ದಾರೆ. ಹಾಗೂ ಕಾಂಗ್ರೆಸ್ ಪಕ್ಷವು ಎಜೆಎಲ್ಗೆ ನೀಡಿದ್ದ ₹90.2 ಕೋಟಿ ಸಾಲವನ್ನು 9.02 ಕೋಟಿಯ ಈಕ್ವಿಟಿ ಷೇರುಗಳನ್ನಾಗಿ ಪರಿವರ್ತಿಸಿ ಯಂಗ್ ಇಂಡಿಯನ್ಗೆ ವರ್ಗಾಯಿಸಲಾಗಿದೆ ಎಂದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ತಿಳಿಸಿದೆ.
.SSLC Result 2025: ಕೃಷಿಕನ ಪುತ್ರಿ ರಾಜ್ಯಕ್ಕೆ ಪ್ರಥಮ.SSLC Results: ಬೆಳಗಾವಿಗೆ 25, ಚಿಕ್ಕೋಡಿಗೆ 26ನೇ ಸ್ಥಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.