ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ವಿಚಾರಣೆಗೆ ಅಂಗೀಕರಿಸುವ ಕುರಿತು ಆದೇಶ ಪ್ರಕಟಣೆಯನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.

ಪಿತೂರಿ ಹಾಗೂ ಹಣ ಅಕ್ರಮ ವರ್ಗಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್(ಮೃತರು) ಹಾಗೂ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ‘ಯಂಗ್ ಇಂಡಿಯನ್’ ಕಂಪನಿ ಆರೋಪಿಗಳು ಎಂದು ಇ.ಡಿ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ಡಿ.16ರಂದು ಈ ಕುರಿತಾದ ಆದೇಶ ಪ್ರಕಟಿಸಲಾಗುವುದು ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ (ಎಜೆಎಲ್)ಗೆ ಸೇರಿದ ಸುಮಾರು ₹2 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಆರೋಪಿಗಳೆಲ್ಲರೂ ಸೇರಿ ತಮ್ಮ ವಶಕ್ಕೆ ಪಡೆದಿದ್ದರು. ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಸೋನಿಯಾ ಹಾಗೂ ರಾಹುಲ್ ಗಾಂಧಿ ಶೇಕಡ 76ರಷ್ಟು ಷೇರು ಹೊಂದಿದ್ದಾರೆ. ₹90 ಕೋಟಿ ಸಾಲಕ್ಕೆ ಬದಲಾಗಿ ಎಜೆಎಲ್ನ ಆಸ್ತಿಗಳನ್ನು ಇವರು ಕಬಳಿಸಿದ್ದರು’ ಎಂದು ಇ.ಡಿ ಆರೋಪಪಟ್ಟಿಯಲ್ಲಿ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.