ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶ | ಭಾರಿ ಮಳೆ: 70ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಸ್ಥಗಿತ

Published 8 ಜುಲೈ 2024, 13:47 IST
Last Updated 8 ಜುಲೈ 2024, 13:47 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಹಲವೆಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 70ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

ಕಿನ್ನೌರ್‌ ಜಿಲ್ಲೆಯ ನಾಥಪ ಸ್ಲೈಡಿಂಗ್‌ ಪಾಯಿಂಟ್‌ ಬಳಿ ಶಿಮ್ಲಾ–ಕಿನ್ನೌರ್‌ ರಾಷ್ಟ್ರೀಯ ಹೆದ್ದಾರಿ–5 ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಂಡಿಯಲ್ಲಿ 31 ರಸ್ತೆಗಳು, ಶಿಮ್ಲಾ 26, ಸಿರ್ಮೌರ್‌ ಮತ್ತು ಕಿನ್ನೌರ್‌ನಲ್ಲಿ ತಲಾ ನಾಲ್ಕು, ಹಮೀರ್‌ಪುರ ಮತ್ತು ಕುಲ್ಲು ಪ್ರದೇಶಗಳಲ್ಲಿ ತಲಾ 2 ಹಾಗೂ ಕಾಂಗ್ರಾ ಜಿಲ್ಲೆಯಲ್ಲಿ 1 ರಸ್ತೆ ಜತೆಗೆ ರಾಷ್ಟ್ರೀಯ ಹೆದ್ದಾರಿ 5 ಒಳಗೊಂಡಂತೆ ಒಟ್ಟು 70 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಭಾರಿ ಮಳೆಯಿಂದಾಗಿ ರಾಜ್ಯದ 84 ವಿದ್ಯುತ್‌ ಪರಿವರ್ತಕಗಳು ಹಾಗೂ 51 ಜಲ ಯೋಜನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಭಾನುವಾರ ಸಂಜೆ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಮಲ್ರೋನ್‌ನಲ್ಲಿ 70 ಮಿ.ಮೀ ದಾಖಲೆ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 11–12ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಶಿಮ್ಲಾ ಪ್ರಾದೇಶಿಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ‘ಯೆಲ್ಲೋ‘ ಅಲರ್ಟ್‌ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT