ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 12ರಿಂದ 6ಕ್ಕೆ ಇಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ನಕ್ಸಲಿಸಂ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ಪ್ರಯತ್ನಗಳೊಂದಿಗೆ ಮೋದಿ ಸರ್ಕಾರ 'ಸಶಕ್ತ, ಸುರಕ್ಷಿತ ಮತ್ತು ಸಮೃದ್ಧ ಭಾರತ'ವನ್ನು ನಿರ್ಮಿಸುತ್ತಿದೆ. 2026ರ ಮಾರ್ಚ್ 31ರೊಳಗೆ ನಕ್ಸಲಿಸಂ ಅನ್ನು ಶಾಶ್ವತವಾಗಿ ಕಿತ್ತೊಗೆಯಲು ಭಾರತ ದೃಢನಿಶ್ಚಯ ಮಾಡಿದೆ ಎಂದು ಅವರು ಹೇಳಿದ್ದಾರೆ.

'ನಕ್ಸಲ್ ಮುಕ್ತ ಭಾರತವನ್ನು ನಿರ್ಮಿಸುವತ್ತ ಹೆಜ್ಜೆ ಇಡುತ್ತಿರುವ ನಮ್ಮ ರಾಷ್ಟ್ರ ಇಂದು ಎಡಪಂಥೀಯ ಉಗ್ರವಾದದಿಂದ ಹೆಚ್ಚು ಪ್ರಭಾವಿತವಾಗಿರುವ ಜಿಲ್ಲೆಗಳ ಸಂಖ್ಯೆಯನ್ನು 12ರಿಂದ ಕೇವಲ 6ಕ್ಕೆ ಇಳಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ' ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
.ಶಸ್ತ್ರಾಸ್ತ್ರಗಳಿಂದ ಬದಲಾವಣೆ ಅಸಾಧ್ಯ: ನಕ್ಸಲ್ ಹಿಂಸಾಚಾರದ ಕುರಿತು ಶಾ ಹೇಳಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.