ನವದೆಹಲಿ: ಮಾವೋವಾದಿ ನಕ್ಸಲರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಯೋಧರು ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಭಾನುವಾರ ಚರ್ಚೆ ನಡೆಸಿದರು.

ಛತ್ತೀಸಗಡಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ಮಾಡುವಂತೆ ಸಿಆರ್‌ಪಿಎಫ್ ನ ಮಹಾ ನಿರ್ದೇಶಕ ಕುಲದೀಪ್ ಸಿಂಗ್ ಅವರಿಗೆ ಶಾ ನಿರ್ದೇಶನ ನೀಡಿದರು.

‘ಎನ್‌ಕೌಂಟರ್ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಘೇಲ್ ಅವರು ಗೃಹ ಸಚಿವ ಶಾ ಅವರಿಗೆ ವಿವರಿಸಿದರು’ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್‌ನ ಐವರು ಯೋಧರು ಹುತಾತ್ಮರಾಗಿ, 30 ಹೆಚ್ಚು ಯೋಧರು ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.