ಅಮರಾವತಿ: ಆಂಧ್ರಪ್ರದೇಶದ ಮಾರೇಡುಮಿಲ್ಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರ ವಿರುದ್ಧ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಆಂಧ್ರಪ್ರದೇಶದ ಗುಪ್ತಚರ ವಿಭಾಗದ ಎಡಿಜಿಪಿ ಮಹೇಶ್ ಚಂದ್ರ ಲಡ್ಡಾ ತಿಳಿಸಿದ್ದಾರೆ.

ಎನ್ಕೌಂಟರ್ನಲ್ಲಿ ಶ್ರೀಕಾಕುಳಂ ಮೂಲದ ಮೇತುರಿ ಜೋಖಾ ರಾವ್ ಅಲಿಯಾಸ್ ಶಂಕರ್ ಮೃತಪಟ್ಟಿದ್ದಾನೆ. ಈತ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಕ್ಷೇತ್ರ ಸಮಿತಿ (ಎಸಿಎಂ) ಸದಸ್ಯನಾಗಿದ್ದ ಮತ್ತು ತಾಂತ್ರಿಕ ವಿಷಯಗಳು, ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದ ಎಂದು ಲಡ್ಡಾ ವಿವರಿಸಿದ್ದಾರೆ.

ಆಂಧ್ರದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಮಾವೊವಾದಿ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ, ನಕ್ಸಲ್ ಮಿಲಿಟರಿ ಕಾರ್ಯಾಚರಣೆಗಳ ‘ಮಾಸ್ಟರ್ ಮೈಂಡ್’ ಎಂದೇ ಹೆಸರಾಗಿದ್ದ ಛತ್ತೀಸಗಢದ ಮಾಡವಿ ಹಿಡ್ಮಾ (51) ಮತ್ತು ಆತನ ಪತ್ನಿ ಮದಕಂ ರಾಜೆ ಸೇರಿದಂತೆ ಆರು ನಕ್ಸಲರನ್ನು ಪೊಲೀಸರು ಹತ್ಯೆ ಮಾಡಿದ್ದರು.

ಛತ್ತೀಸಗಢದಲ್ಲಿ ನಕ್ಸಲರ ವಿರುದ್ಧ ಆಪರೇಷನ್ ಬ್ಲ್ಯಾಕ್ ಫಾರೆಸ್ಟ್ (ಆಪರೇಷನ್ ಕಗಾರ್) ಕಾರ್ಯಾಚರಣೆ ತೀವ್ರಗೊಂಡ ಬೆನ್ನಲ್ಲೇ, ಹಿಡ್ಮಾ, ಪತ್ನಿ ಮತ್ತು ತನ್ನ ನಾಲ್ವರು ಭದ್ರತಾ ಸಿಬ್ಬಂದಿ ಜತೆಗೆ ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.