ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಭದ್ರತಾ ಪಡೆಗಳ ಗುಂಡಿಗೆ ಓರ್ವ ನಕ್ಸಲ್ ಹತ

Published 11 ಮೇ 2024, 15:19 IST
Last Updated 11 ಮೇ 2024, 15:19 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಢದ ಧಮಾತ್ರಿ ಹಾಗೂ ಗರಿಯಾಬಂದ್ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್‌ನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.

ಧಮಾತ್ರಿ ಜಿಲ್ಲಾ ಮೀಸಲು ಗಾರ್ಡ್‌ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಧಮಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಂಜನೇಯ ವಾರ್ಷ್ಣೆ ತಿಳಿಸಿದ್ದಾರೆ.

ಗುಂಡಿನ ಕಾಳಗ ಮುಗಿದ ಬಳಿಕ ಓರ್ವ ನಕ್ಸಲ್ ಮೃತದೇಹವನ್ನು ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ಘಟನೆ ನಡೆದ ಸ್ಥಳ ರಾಜಧಾನಿ ರಾಯಪುರದಿಂದ 15 ಕಿ.ಮಿ ದೂರದಲ್ಲಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಬೇಕಷ್ಟೇ. ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ಜಾರಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದಲ್ಲಿ ಈವರೆಗೆ ಒಟ್ಟು 104 ನಕ್ಸಲರನ್ನು ಕೊಲ್ಲಲಾಗಿದೆ. ಶುಕ್ರವಾರ ಬಿಜಾಪುರ ಜಿಲ್ಲೆಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT