ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ನಕ್ಸಲನ ಹತ್ಯೆ

Published 11 ಮೇ 2024, 15:31 IST
Last Updated 11 ಮೇ 2024, 15:31 IST
ಅಕ್ಷರ ಗಾತ್ರ

ರಾಯಪುರ (ಪಿಟಿಐ): ಛತ್ತೀಸಗಢದ ಧಮ್ತರಿ ಮತ್ತು ಗರಿಯಬಂದ್‌ ಜಿಲ್ಲೆಗಳ ಗಡಿಭಾಗದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರೊಬ್ಬರು ಸಾವಿಗೀಡಾಗಿದ್ದಾರೆ.

‘ಧಮ್ತರಿಯ ಜಿಲ್ಲಾ ಮೀಸಲು ಪಡೆಯು ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ’ ಎಂದು ಧಮ್ತರಿಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆಂಜನೇಯ ವರ್ಷ್ನೆ ಶನಿವಾರ ತಿಳಿಸಿದ್ದಾರೆ.

‘ಮೃತ ನಕ್ಸಲನ ಗುರುತು ಪತ್ತೆಯಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT