ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಭದ್ರತಾ ಸಿಬ್ಬಂದಿಯೊಂದಿಗೆ ಗುಂಡಿನ ಚಕಮಕಿ– ನಕ್ಸಲ್ ಹತ

Published 29 ಏಪ್ರಿಲ್ 2024, 5:06 IST
Last Updated 29 ಏಪ್ರಿಲ್ 2024, 5:06 IST
ಅಕ್ಷರ ಗಾತ್ರ

ರಾಯ‍ಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸ್‌ ಸಿಬ್ಬಂದಿಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ.

ಜಿಲ್ಲಾ ಮೀಸಲು ಗಾರ್ಡ್‌ ಹಾಗೂ ಕೋಬ್ರಾ ಪಡೆಗಳು ಕಿಸ್ತರಾಮ್ ಪೊಲೀಸ್‌ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಕಾರ್ಯಚರಣೆ ನಡೆಸುವ ವೇಳೆ ಗುಂಡಿನ ಕಾಳಗ ನಡೆದಿದೆ ಎಂದು ಸುಕ್ಮಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿರಣ್‌ ಜಿ. ಚವಾಣ್‌ ಹೇಳಿದ್ದಾರೆ.

ರಾಜ್ಯ ರಾಜಧಾನಿ ರಾಯಪುರದಿಂದ 450 ಕಿ.ಮಿ ದೂರದಲ್ಲಿ ಘಟನೆ ನಡೆದಿದೆ. ಚಕಮಕಿ ಬಳಿಕ ಓರ್ವ ನಕ್ಸಲ್‌ನ ಮೃತದೇಹ ಹಾಗೂ ಕೆಲವು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯೊಂದಿಗೆ ಬಾಸ್ತಾರ್‌ ವಲಯದಲ್ಲಿ ಈ ವರ್ಷ 81 ನಕ್ಸಲರು ಹತರಾದಂತಾಗಿದೆ. ಸುಕ್ಮಾ ಸೇರಿ ಒಟ್ಟು 7 ಜಿಲ್ಲೆಗಳು ಬಾಸ್ತಾರ್‌ ವಲಯದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT