ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಎನ್ಕೌಂಟರ್ನಲ್ಲಿ ಒಬ್ಬ ನಕ್ಸಲ್ ಮೃತಪಟ್ದಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ವಿಶೇಷ ಕಾರ್ಯಪಡೆ ಹಾಗೂ ಸಿಆರ್ಪಿಎಫ್ ಘಟಕವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಿಂದ ಒಬ್ಬ ನಕ್ಸಲನ ಮೃತದೇಹ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಪ್ರದೇಶದಲ್ಲಿ ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ನ ಕೋಬ್ರಾ ಕಮಾಂಡೊ ಮೆಹುಲ್ ಸೋಲಂಕಿ ಹುತಾತ್ಮರಾಗಿದ್ದು, ಒಬ್ಬ ನಕ್ಸಲ್ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಪ್ರಮುಖ ನಕ್ಸಲ್ ನಾಯಕ ನಂಬಾಲಾ ಕೇಶವ್ ರಾವ್ ಅಲಿಯಾಸ್ ಬಸವರಾಜು (70) ಸೇರಿ 27 ನಕ್ಸಲರನ್ನು ಭದ್ರತಾ ಪಡೆಗಳು ಬುಧವಾರ ಹತ್ಯೆ ಮಾಡಿದ್ದವು.

ಬಸವರಾಜು ಅವರ ಹತ್ಯೆಯು ಭದ್ರತಾ ಪಡೆಗಳಿಗೆ ದೊರಕಿದ ಗೆಲುವು ಎನ್ನಲಾಗಿದೆ. ಬಸವರಾಜು ಹತ್ಯೆಯನ್ನು ಖಚಿತಪಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಇದೊಂದು ಐತಿಹಾಸಿಕ ಸಾಧನೆ’ ಎಂದು ಬಣ್ಣಿಸಿದ್ದಾರೆ. ಇನ್ನೊಂದೆಡೆ, ಬಸವರಾಜು ಅವರ ಹತ್ಯೆಯು ನಕ್ಸಲ್ ಚಳವಳಿಗೆ ಆದ ಹಿನ್ನಡೆ ಎಂದೂ ವಿಶ್ಲೇಷಿಸಲಾಗುತ್ತಿದೆ.
.Chhattisgarh Encounter: ನಕ್ಸಲ್ ನಾಯಕ ಬಸವರಾಜು ಸೇರಿದಂತೆ 27 ಮಂದಿಯ ಹತ್ಯೆ.Chhattisgarh Encounter: ಓರ್ವ ನಕ್ಸಲ್ ಹತ, ಕೋಬ್ರಾ ಕಮಾಂಡೊ ಹುತಾತ್ಮ .Chhattisgarh Encounter | ನಕ್ಸಲ್ ನಿಗ್ರಹ; ಚಾರಿತ್ರಿಕ ಸಾಧನೆ: ಅಮಿತ್ ಶಾ.Chhattisgarh Encounter: ಮೂವರು ನಕ್ಸಲರ ಹತ್ಯೆ, ಮುಂದುವರಿದ ಕಾರ್ಯಾಚರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.