ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸ್‌ಗಢ: ನಕ್ಸಲರಿಂದ ಇಬ್ಬರು ನಾಗರೀಕರ ಹತ್ಯೆ

Published 23 ಫೆಬ್ರುವರಿ 2024, 5:47 IST
Last Updated 23 ಫೆಬ್ರುವರಿ 2024, 5:47 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸ್‌ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ನಾಗರೀಕರನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತರನ್ನು ದುಲ್ಹೇದ್ ಗ್ರಾಮದ ನಿವಾಸಿಗಳಾದ ಸೋಧಿ ಮತ್ತು ನಂದಾ ಎಂದು ಗುರುತಿಸಲಾಗಿದೆ. ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಪ್ರದೇಶದಲ್ಲಿ ಇನ್ನು ಮುಂದೆ ಕೊಲೆಗಳನ್ನು ಮಾಡಲಾಗುವುದು ಎಂದು ನಕ್ಸಲರು ಎಚ್ಚರಿಕೆ ನೀಡಿದ್ದರಿಂದ ಅಲ್ಲಿಗೆ ಭದ್ರತಾ ಹಾಗೂ ಪೊಲೀಸ್‌ ತಂಡಗಳನ್ನು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ತಮ್ಮ ನೆಲೆಗಳನ್ನು ಕಳೆದುಕೊಂಡು ಹತಾಶರಾಗಿರುವ  ನಕ್ಸಲೀಯರು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದಾರೆ. ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳು ಸಾಮಾನ್ಯ ಜನರನ್ನು ತಲುಪುವುದನ್ನು ಅವರು ಬಯಸುತ್ತಿಲ್ಲ, ಆದ್ದರಿಂದ ಇಂತಹ ಕೃತ್ಯಗಳಿಗೆ ಇಳಿದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT