ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್ ವಿರುದ್ಧದ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಯ 8 ಸಿಬ್ಬಂದಿ ಹುತಾತ್ಮ– ಶರ್ಮಾ

Published 15 ಫೆಬ್ರುವರಿ 2024, 10:46 IST
Last Updated 15 ಫೆಬ್ರುವರಿ 2024, 10:46 IST
ಅಕ್ಷರ ಗಾತ್ರ

ರಾಯಪುರ: ಕಳೆದ ಎರಡು ತಿಂಗಳಲ್ಲಿ ಛತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಯ 8 ಸಿಬ್ಬಂದಿ ಹುತಾತ್ಮರಾಗಿದ್ದು ಹಾಗೂ 53 ಜನ ಯೋಧರು ಗಾಯಗೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ವಿಜಯ್‌ ಶರ್ಮಾ ತಿಳಿಸಿದ್ದಾರೆ.

ಇದೇ ಅವಧಿಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಎಂಟು ನಕ್ಸಲೀಯರು ಹತರಾಗಿದ್ದಾರೆ ಎಂದು ಅವರು ವಿಧಾನಸಭೆಗೆ ಮಾಹಿತಿ ನೀಡಿದರು. 

ಘಟನೆಗಳು ರಾಜ್ಯದಲ್ಲಿ ನವೆಂಬರ್ 30,2023 ರಿಂದ ಈ ವರ್ಷದ ಜನವರಿ 30 ರವರೆಗೆ ನಡೆದಿವೆ ಎಂದು ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಅವರು ಕೇಳಿದ ಲಿಖಿತ ಪ್ರಶ್ನೆಗೆ ವಿಜಯ್ ಶರ್ಮಾ ಉತ್ತರಿಸಿದರು.

ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲರ ವಿರುದ್ಧ ಹೆಚ್ಚು ಕಾರ್ಯಾಚರಣೆಗಳು ನಡೆದಿವೆ ಎಂದು ಅವರು ಮಾಹಿತಿ ನೀಡಿದರು. ಇಲ್ಲಿ ವಿಶೇಷ ಕೋಬ್ರಾ ಪಡೆ ಹಾಗೂ ಸಿಆರ್‌ಪಿಎಫ್ ಯೋಧರು ನಕ್ಸಲರ ವಿರುದ್ಧದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವರಿಗೆ ಸ್ಥಳೀಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT