ನಾರಾಯಣಪುರ: ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ಕಬ್ಬಿಣ ಅದಿರು ಗಣಿಯೊಂದರ ಮೇಲೆ ನಕ್ಸಲರು ಶನಿವಾರ ದಾಳಿ ನಡೆಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

‘ಈ ಘಟನೆಯಲ್ಲಿ ಗಣಿಯ ಇಬ್ಬರು ಉದ್ಯೋಗಿಗಳು ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಛೋಟೆ ದೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಆಮ್‌ದಾಯಿ ಕಬ್ಬಿಣ ಅದಿರು ಗಣಿಯಲ್ಲಿ ಈ ದಾಳಿ ನಡೆದಿದೆ’ ಎಂದು ನಾರಾಯಣಪುರದ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗರ್ಗ್ ಮಾಹಿತಿ ನೀಡಿದರು.

‘ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಭದ್ರತಾ ಪಡೆಯು ಘಟನಾ ಸ್ಥಳಕ್ಕೆ ತೆರಳಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ತಿಳಿಸಿದರು.

ಇದನ್ನೂ ಓದಿ... ಸ್ಯಾಮ್ಸಂಗ್ ಗ್ಯಾಲಕ್ಸಿ M32: ದೊಡ್ಡ ಬ್ಯಾಟರಿಯ ಸ್ಮಾರ್ಟ್ ವೈಶಿಷ್ಟ್ಯಗಳ ಫೋನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.