ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಆಯ್ಕೆ

Published 12 ಮಾರ್ಚ್ 2024, 9:21 IST
Last Updated 12 ಮಾರ್ಚ್ 2024, 9:21 IST
ಅಕ್ಷರ ಗಾತ್ರ

ಹರಿಯಾಣ: ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹರಿಯಾಣ ಬಿಜೆಪಿ ಅಧ್ಯಕ್ಷ ನಯಾಬ್‌ ಸಿಂಗ್‌ ಸೈನಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಶಾಸಕ ಸುಭಾಷ್ ಸುಧಾ ಹೇಳಿದ್ದಾರೆ.

ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ಅಭ್ಯರ್ಥಿಯಾಗಿರುವ ನಯಾಬ್‌ ಸಿಂಗ್‌ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ನಯಾಬ್‌ ಸಿಂಗ್‌ ಇಂದು ಸಂಜೆ 5 ಗಂಟೆಗೆ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT