ಮುಂಬೈ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತು ಹೊಂದಿದ್ದ 74,000 ಮಾತ್ರೆಗಳು ಮತ್ತು 2.44 ಲಕ್ಷ ನಕಲಿ ಬ್ರಾಂಡ್ಗಳ ಸಿಗರೇಟ್ಗಳನ್ನು ಮಾದಕವಸ್ತು ನಿಯಂತ್ರಣ ದಳ (ಎನ್ಸಿಬಿ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಚಿತ ಸುಳಿವಿನ ಮೇರೆಗೆ ಎನ್ಸಿಬಿ ಮುಂಬೈ ವಲಯ ಘಟಕವು ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ಲಾಜಿಸ್ಟಿಕ್ಸ್ ಕಂಪನಿಗಳಿಗೆ ಸೇರಿದ ಎರಡು ಕಂಟೈನರ್ಗಳನ್ನು ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್ನಲ್ಲಿ ತಪಾಸಣೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಮತ್ತು ಶನಿವಾರದಂದು ನಡೆಸಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹75 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಒಳಗೊಂಡ 74,000 ಮಾತ್ರೆಗಳು ಮತ್ತು 2.44 ಲಕ್ಷ ನಕಲಿ ಬ್ರಾಂಡ್ಗಳ ಸಿಗರೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾದಕ ವಸ್ತುಗಳನ್ನು ಆಹಾರ ಪದಾರ್ಥಗಳೆಂದು ತಪ್ಪಾಗಿ ದಾಖಲಿಸಿ ಲಂಡನ್ಗೆ ಸಾಗಿಸಲು ಯೋಜಿಸಲಾಗಿತ್ತು. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.