ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃತಿಚೌರ್ಯದ ವಿರುದ್ಧ NCERT ಎಚ್ಚರಿಕೆ

Published 8 ಏಪ್ರಿಲ್ 2024, 14:29 IST
Last Updated 8 ಏಪ್ರಿಲ್ 2024, 14:29 IST
ಅಕ್ಷರ ಗಾತ್ರ

ನವದೆಹಲಿ: ಶಾಲಾ ಪಠ್ಯಪುಸ್ತಕಗಳ ಕೃತಿಚೌರ್ಯದ ವಿರುದ್ಧ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸೋಮವಾರ ಎಚ್ಚರಿಕೆ ನೀಡಿದೆ.  

ಇದರಿಂದ ತಪ್ಪು ಮಾಹಿತಿ ಸಹ ದೊರೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ತನ್ನ ಶೈಕ್ಷಣಿಕ ಪಠ್ಯಪುಸ್ತಕಗಳ ಕೃತಿಸ್ವಾಮ್ಯ ಹಕ್ಕನ್ನು ಉಲ್ಲಂಘಿಸುವುದು ಮತ್ತು ಎನ್‌ಸಿಇಆರ್‌ಟಿ ಶಾಲಾ ಪಠ್ಯಪುಸ್ತಕಗಳ ಅನಧಿಕೃತ ಮುದ್ರಣ ಮತ್ತು ವಾಣಿಜ್ಯ ಮಾರಾಟದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸೂಚಿಸಿದೆ.

‘ಕೆಲ ನಿರ್ಲಜ್ಜ ಪ್ರಕಾಶಕರು ಎನ್‌ಸಿಇಆರ್‌ಟಿ ಶಾಲಾ ಪಠ್ಯಪುಸ್ತಕವನ್ನು ತಮ್ಮದೇ ಹೆಸರಿನಲ್ಲಿ ಮುದ್ರಿಸಿದ್ದಾರೆ. ಕೃತಿಸ್ವಾಮ್ಯ ಹಕ್ಕು ಪಡೆಯದೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಮುದ್ರಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು’ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು’ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT