ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಲಿಕಾಂ ನೀತಿ ಬದಲಿಸಿದ ₹ 150 ಕೋಟಿ ಚುನಾವಣಾ ಬಾಂಡ್‌: ಅಸಾದುದ್ದೀನ್‌ ಒವೈಸಿ

Published 28 ಮಾರ್ಚ್ 2024, 13:42 IST
Last Updated 28 ಮಾರ್ಚ್ 2024, 13:42 IST
ಅಕ್ಷರ ಗಾತ್ರ

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಂಪನಿಯೊಂದರಿಂದ ₹ 150 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಪಡೆದ ಬಳಿಕ ಟೆಲಿಕಾಂ ನೀತಿಯನ್ನು ಬದಲಾಯಿಸಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಗುರುವಾರ ಆರೋಪಿಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ನೀತಿಯಲ್ಲಿ ಈ ರೀತಿ ಬದಲಾವಣೆ ಮಾಡಿದ್ದರ ಲಾಭ ಯಾರಿಗೆ ದೊರೆತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. 2ಜಿ ಒಂದು ಹಗರಣವಾಗಿದ್ದರೆ, ಇದು ಏನು’ ಎಂದು ಅವರು ಪ್ರಶ್ನಿಸಿದ್ದಾರೆ.  

ಭಾರ್ತಿ ಗ್ರೂಪ್‌ ಈ ಮೊತ್ತವನ್ನು ದೇಣಿಗೆ ನೀಡಿದೆ ಎಂದು ಸೂಚಿಸುವ ವರದಿಯ ಚಿತ್ರವನ್ನು ಒವೈಸಿ ಪೋಸ್ಟ್‌ನಲ್ಲಿ ಟ್ಯಾಗ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT