ಜೈಪುರ: ಮಾಜಿ ಪ್ರಧಾನಿ ದಿವಗಂತ ಮನಮೋಹನ ಸಿಂಗ್ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಎನ್ಡಿಎ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕಿಡಿಕಾರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮನಮೋಹನ ಸಿಂಗ್ ಅವರಂತಹ ಮಹಾನ್ ಚೇತನದ ಅಂತ್ಯಕ್ರಿಯೆ ವಿಚಾರದಲ್ಲೂ ಕೇಂದ್ರ ಸರ್ಕಾರ ಕಡೆಗಣಿಸಿದ್ದು, ಇದೀಗ ಸಿಂಗ್ ಅವರಿಗೆ ಸ್ಮಾರಕ ನಿರ್ಮಾಣ ವಿಚಾರದಲ್ಲೂ ಅನಗತ್ಯ ವಿವಾದ ಸೃಷ್ಟಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
.ಶಿವರಾಜ್ಕುಮಾರ್ ಮನೆಯ ‘ನೀಮೋ’ ಹೆಸರಿನ ಶ್ವಾನ ನಿಧನ; ಗೀತಾ ಭಾವನಾತ್ಮಕ ಪತ್ರ.Manmohan Singh funeral: ಮಾಜಿ ಪ್ರಧಾನಿ, ಅರ್ಥಮಾಂತ್ರಿಕನಿಗೆ ಕಣ್ಣೀರಿನ ವಿದಾಯ.
ವಿರೋಧ ಪಕ್ಷ ಹಾಗೂ ಸಾರ್ವಜನಿಕರ ಒತ್ತಡಕ್ಕೆ ಮಣಿದು ಮನಮೋಹನ ಸಿಂಗ್ ಅವರಿಗೆ ‘ಭವಿಷ್ಯ‘ದಲ್ಲಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

2010 ರಲ್ಲಿ ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ನಿಧನರಾದಾಗ ಬಿಜೆಪಿಯ ಯಾವುದೇ ಬೇಡಿಕೆ ಇಲ್ಲದೇ ಕಾಂಗ್ರೆಸ್ ಸರ್ಕಾರವು ಅವರ ಕುಟುಂಬದೊಂದಿಗೆ ಮಾತನಾಡಿ ಜೈಪುರದಲ್ಲಿ ಅವರ ಅಂತ್ಯಕ್ರಿಯೆಗಾಗಿ ವಿಶೇಷ ಸ್ಥಳವನ್ನು ಮಂಜೂರು ಮಾಡಿತ್ತು. ಅಲ್ಲಿಯೇ ಅವರಿಗೆ ಸ್ಮಾರಕ ನಿರ್ಮಿಸಲಾಯಿತು ಎಂದು ಗೆಹಲೋತ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ 2012ರಲ್ಲಿ ಬಾಳ್ ಠಾಕ್ರೆ ನಿಧನರಾದಾಗ ಕಾಂಗ್ರೆಸ್ ಸರ್ಕಾರವು ಅವರ ಅಂತ್ಯಕ್ರಿಯೆಗಾಗಿ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ವಿಶೇಷ ಸ್ಥಳವನ್ನು ನೀಡಿತು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಯಾವಾಗಲೂ ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತವಾದ ವಿದಾಯ ನೀಡುತ್ತದೆ, ಆದರೆ ಮನಮೋಹನ್ ಸಿಂಗ್ ಅವರ ಬಗ್ಗೆ ಬಿಜೆಪಿಯ ಇಂತಹ ವರ್ತನೆ ತೋರಿರುವುದು ದುರದೃಷ್ಟಕರ ಎಂದು ಗೆಹಲೋತ್ ಹೇಳಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಶನಿವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
.ಮಹಿಳಾ ಸಮ್ಮಾನ್ ಯೋಜನೆ | AAP ವಿರುದ್ಧ ದೀಕ್ಷಿತ್ ವಂಚನೆ ಆರೋಪ: ತನಿಖೆಗೆ LG ಆದೇಶ.ಫಿಫ್ಟಿ ಗಳಿಸಿದಾಗ ಪುಷ್ಪ, ಶತಕ ಗಳಿಸಿದಾಗ ಬಾಹುಬಲಿ ಶೈಲಿಯಲ್ಲಿ ನಿತೀಶ್ ಸಂಭ್ರಮ.
ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನವದೆಹಲಿಯ ನಿಗಮಬೋಧ್ ಘಾಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಖರ್ಗೆ, ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂದು ಪ್ರಧಾನಿ ಮೋದಿಗೆ ಪತ್ರದ ಮೂಲಕ ತಿಳಿಸಿದ್ದರು.

‘ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನಡೆಸದೇ ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ’ ಎಂದೂ ಕಾಂಗ್ರೆಸ್ ಆರೋಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.