ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.8ರಂದು ಪ್ರಧಾನಿಯಾಗಿ ಪ್ರಮಾಣವಚನ?

Published 5 ಜೂನ್ 2024, 13:30 IST
Last Updated 5 ಜೂನ್ 2024, 13:30 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಯಿತು. 

ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಎನ್‌ಡಿಎ ನಾಯಕರು ಹೇಳಿದ್ದಾರೆ. 

ಗುರುವಾರ ನರೇಂದ್ರ ಮೋದಿ ನೇತೃತ್ವದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿರುವ ಎನ್‌ಡಿಎ ನಾಯಕರು ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ. 

ಜೂನ್‌ 8ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಿಡಿಪಿಯ ಚಂದ್ರಬಾಬು ನಾಯ್ಡು, ಜನಸೇನಾ ಪವನ್‌ ಕಲ್ಯಾಣ್‌, ಜೆಡಿಯು ನಿತೀಶ್‌ ಕುಮಾರ್‌, ಜೆಡಿಎಸ್‌ನ ಕುಮಾರಸ್ವಾಮಿ ಸೇರಿದಂತೆ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT