ನವದೆಹಲಿ: 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಯು ಮೈತ್ರಿಕೂಟ ‘ಎನ್ಡಿಎ’ಸರಳ ಬಹುಮತ ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ನಡೆಸಿದ ಸಮೀಕ್ಷೆ ತಿಳಿಸಿದೆ.
243 ವಿಧಾನಸಭಾ ಸ್ಥಾನಗಳ ಪೈಕಿ, ರಾಷ್ಟ್ರೀಯ ಜನತಾದಳ (ಆರ್ ಜೆಡಿ), ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಈ ಸಲವು ಅಧಿಕಾರದಿಂದ ದೂರ ಉಳಿಯಲಿದೆ ಎಂದು ಭವಿಷ್ಯ ನುಡಿದಿದೆ. ಎನ್ ಡಿಎ 135-159 ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಎಬಿಪಿ-ಸಿವೋಟರ್ ಅಂದಾಜಿಸಿದೆ.
ಎನ್ ಡಿಎಗೆ ಶೇ 43, ಮಹಾಮೈತ್ರಿಕೂಟಕ್ಕೆ ಶೇ 35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ. 4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಜೆಡಿ(ಯು) 59 ರಿಂದ 67 ಸ್ಥಾನಗಳು ಮತ್ತು ವಿಕಾಸ್ ಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮೂರರಿಂದ ಏಳು ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಆರ್ ಜೆಡಿ 56 ರಿಂದ 64 ಸ್ಥಾನಗಳು, ಕಾಂಗ್ರೆಸ್ 12 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ಅಭಿಪ್ರಾಯಪಟ್ಟಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.