ಪಟ್ನಾ: ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಜೆಡಿಯು ಭರವಸೆ ವ್ಯಕ್ತಪಡಿಸಿದೆ.

ಮಧ್ಯಾಹ್ನ 2.30ಕ್ಕೆ ಲಭ್ಯವಿದ್ದ ಮಾಹಿತಿ ಪ್ರಕಾರ ಎನ್‌ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಮಹಾಘಟಬಂಧನ್ 101 ಸ್ಥಾನಗಳಲ್ಲಿ ಮುನ್ನಡೆಯಲ್ಲಿತ್ತು.ಈ ಪೈಕಿ ಬಿಜೆಪಿ 73, ಜೆಡಿಯು 48, ಎಲ್‌ಜೆಪಿ 2, ಆರ್‌ಜೆಡಿ 67, ಕಾಂಗ್ರೆಸ್ 19, ಸಿಪಿಐ (ಎಂಎಲ್) 11, ಎಲ್‌ಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.

'ನಾನು ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಯಕತ್ವದಲ್ಲಿ ಎನ್‌ಡಿಎ ಬಿಹಾರದಲ್ಲಿ ಸರ್ಕಾರ ರಚಿಸಲಿದೆ. ಮತದಾರರನ್ನು ದಾರಿತಪ್ಪಿಸಲು ವಿರೋಧ ಪಕ್ಷಗಳು ದುರುದ್ದೇಶದ ಪ್ರಚಾರ ನಡೆಸಿದವು' ಎಂದು ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ವಸಿಷ್ಟ ನಾರಾಯಣ ಸಿಂಗ್ ಹೇಳಿದರು.

'ಬಿಎಪಿ ಅಥವಾ ಜೆಡಿಯು- ಯಾವ ಪಕ್ಷಕ್ಕೆ ಸೇರಿದವರು ಮುಖ್ಯಮಂತ್ರಿಯಾಗ್ತಾರೆ' ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಲವು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ' ಎಂದು ಹೇಳಿದರು.

ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ಬಂದರೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದಾರೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.